ಮೈಸೂರು: ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಆರೋಪಿಯೊಬ್ಬ ಮೊಬೈಲ್ ಬಳಕೆ ಮಾಡುತ್ತಿರುವುದು ತಪಾಸಣೆ ವೇಳೆಯಲ್ಲಿ ಕಂಡು ಬಂದಿದ್ದು, ಆರೋಪಿಯಿಂದ ಮೊಬೈಲ್ ಜಪ್ತಿ ಮಾಡಲಾಗಿದೆ.
ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಕಾರಾಗೃಹದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ರವಿ ಎಂಬ ಆರೋಪಿಯ ಬಳಿಯಲ್ಲಿ ಮೊಬೈಲ್ ಇರುವುದು ಕಂಡು ಬಂತು. ತಕ್ಷಣ ಆರೋಪಿಯಿಂದ ಮೊಬೈಲ್ ವಶಕ್ಕೆ ಪಡೆದು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.