ಕರುಗಳ ಪಾಲನೆಯಿಂದ ಹೈನುಗಾರಿಕೆಯಲ್ಲಿ ಲಾಭ

ತಾಲೂಕಿನ ಕಳಲೆ ಗ್ರಾಮದಲ್ಲಿ ಪಶು ಇಲಾಖೆ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಕಾರ್ಯಕ್ರಮವನ್ನು ಡಾ. ಮೋಹನ್ ಕುಮಾರ್ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ಲತಾ ಮಹೇಶ್, ಮಹೇಶ್, ಹರೀಶ್ ಇತರರು ಇದ್ದರು.
ತಾಲೂಕಿನ ಕಳಲೆ ಗ್ರಾಮದಲ್ಲಿ ಪಶು ಇಲಾಖೆ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಕಾರ್ಯಕ್ರಮವನ್ನು ಡಾ. ಮೋಹನ್ ಕುಮಾರ್ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ಲತಾ ಮಹೇಶ್, ಮಹೇಶ್, ಹರೀಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಿಶ್ರತಳಿ ಆಕಳು ಪ್ರದರ್ಶನದಲ್ಲಿ ಡಾ.ಮೋಹನ್‌ಕುಮಾರ್ ಸಲಹೆ
ನಂಜನಗೂಡು: ಕರುಗಳನ್ನು ಚೆನ್ನಾಗಿ ಪಾಲನೆ ಮಾಡಿದಾಗ ಮುಂದಿನ ದಿನಗಳಲ್ಲಿ ಅವು ಆರೋಗ್ಯವಂತ ಹಸುಗಳಾಗಿ ಹೈನುಗಾರಿಕೆಯಲ್ಲಿ ಲಾಭ ಹೆಚ್ಚಾಗುತ್ತದೆ ಎಂದು ತಾಲೂಕಿನ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ಮೋಹನ್‌ಕುಮಾರ್ ಅಭಿಪ್ರಾಯಪಟ್ಟರು.
ತಾಲೂಕಿನ ಕಳಲೆ ಗ್ರಾಮದಲ್ಲಿ ಸೋಮವಾರ ಪಶುಪಾಲನಾ ಇಲಾಖೆ ಹಾಗೂ ಕಳಲೆ ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣು ಕರುಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಹಾಗೂ ರೈತರನ್ನು ಉತ್ತೇಜಿಸಲು ಕರುಗಳನ್ನು ಉತ್ತಮವಾಗಿ ಪೋಷಣೆ ಮಾಡಿರುವ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದರು.
ಕಳಲೆ ಗ್ರಾಪಂ ಮಾಜಿ ಅಧ್ಯಕ್ಷ ಮಹೇಶ್ ಮಾತನಾಡಿ, ಪಶು ಇಲಾಖೆ ನಡೆಸುತ್ತಿರುವ ಈ ಕಾರ್ಯಕ್ರಮದಿಂದ ರೈತರಿಗೆ ಉತ್ತೇಜನ ಸಿಕ್ಕಂತಾಗಿದೆ. ಪ್ರತಿ ವರ್ಷ ಇಂತಹ ಕಾರ್ಯಕ್ರಮಗಳು ನಡೆಯುತ್ತಿರಬೇಕು ಎಂದರು.
ಕಳಲೆ ಸುಬ್ಬಣ್ಣ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿವಿ ಪ್ರಸಾದ್ ಮಾತನಾಡಿ, ಕೃಷಿ ಜತೆಗೆ ಹೈನುಗಾರಿಕೆಯು ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿದೆ. ಸರ್ಕಾರದ ಇಂತಹ ಕಾರ್ಯಕ್ರಮಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹೆಣ್ಣು ಕರುಗಳ ಪ್ರದರ್ಶನದಲ್ಲಿ ಎಂಟು ರೈತರಿಗೆ ಹಾಲಿನ ಕ್ಯಾನ್‌ಗಳು ಹಾಗೂ ಔಷಧಿಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಳಲೆ ಗ್ರಾಪಂ ಅಧ್ಯಕ್ಷ ಲತಾ ಮಹೇಶ್, ಉಪಾಧ್ಯಕ್ಷ ಹರೀಶ್, ಮಹೇಶ್, ಸಿವಿ ಪ್ರಸಾದ್, ಡಾ.ವಿವೇಕ್, ಡಾ.ರಾಘವೇಂದ್ರ, ಡಾ.ಜಗದೀಶ್, ಡಾ.ಚೇತನ್, ಡಾ.ಚೈತ್ರಾ, ಪ್ರಭಾವತಿ, ಭಾಗ್ಯಮ್ಮ, ರಮೇಶ್, ರಾಹುಲ್, ತೇಜಸ್, ರೇಣುಕಾ, ದಿವ್ಯ, ಯಶೋಧಾ ಸೇರಿದಂತೆ ಗ್ರಾಮದ ಹಾಲು ಉತ್ಪಾದಕರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net