ಯೋಜನೆಗಳು ಸದುಪಯೋಗವಾದರೆ ಯಶಸ್ಸು

ಬೆಟ್ಟದಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ 2025-26ನೇ ಸಾಲಿನ ಕ್ರಿಯಾಯೋಜನೆಯ ಸಾಧಕರಿಗೆ  ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಲೀಲಾವತಿ, ಸಂತೋಷ ಕುಮಾರ್, ವಿನಾಯಕ್, ರಂಜಿತ್, ಕೀರ್ತಿ, ಸುನೀತಾ, ಕೀರ್ತಿರಾಜ್, ದಾಮೋದರ, ಶಿವರಾಜ್, ಅಭಿಲಾಶ್ ಇದ್ದರು.

Published on
ಬೆಟ್ಟದಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನರ ಕಲ್ಯಾಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ನಾಡಿನ ಅಭಿವೃದ್ಧಿಗೆ ಬಹುದೊಡ್ಡ ಕಾಣಿಕೆ ನೀಡುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ 2025-26ನೇ ಸಾಲಿನ ಕ್ರಿಯಾಯೋಜನೆಯ ಸಾಧಕರಿಗೆ ಇತ್ತೀಚೆಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರೋಪಕಾರಿ ಕೆಲಸ ಮಾಡಿ ಬಡವರಿಗೂ ಬದುಕು ಕಟ್ಟಿಕೊಳ್ಳಲು ನೆರವಾಗಿರುವ ಧರ್ಮಸ್ಥಳ ಸಂಸ್ಥೆ ಸದುದ್ದೇಶದ ಭಾವನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುತ್ತಿದೆ. ಅದನ್ನು ಒಳ್ಳೆಯದಕ್ಕೆ ಬಳಸಿಕೊಂಡು ಆರ್ಥಿಕ ಪ್ರಗತಿ ಹೊಂದಬೇಕು. ಈ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ಕೆಲಸ ಮಾಡುವ ಮೂಲಕ ಸಾಧನೆ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ವಲಯ ಯೋಜನಾಧಿಕಾರಿ ಸಂತೋಷಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸ್ವಸಹಾಯ ಗುಂಪು ರಚನೆಯ ಮೂಲಕ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಟ್ಟು, ಕುಟುಂಬದ ಜವಾಬ್ದಾರಿ ನಿಭಾಯಿಸುವ ಶಕ್ತಿ ನೀಡಿದೆ ಎಂದರು.
ಯೋಜನೆಯ ಮೇಲ್ವಿಚಾರಕರಾದ ವಿನಾಯಕ್, ರಂಜಿತ್, ಕೀರ್ತಿ, ಸುನೀತಾ, ಕೀರ್ತಿರಾಜ್, ದಾಮೋದರ, ಶಿವರಾಜ್, ಅಭಿಲಾಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net