ಕೆರೆಗಳ ಪುನಶ್ಚೇತನದೊಂದಿಗೆ ಜೀವಜಲದ ರಕ್ಷಣೆ ಅಗತ್ಯ

ಕೆ.ಆರ್.ನಗರ ತಾಲೂಕಿನ ಅರಕೆರೆ ಗ್ರಾಮದಲ್ಲಿ ಅರಕೆರೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಸಮಿತಿ ವತಿಯಿಂದ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಅಗಸನ ಕೆರೆಯ ಹೂಳೆತ್ತುವ ಕಾಮಗಾರಿಗೆ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಮಮತಾ ರಾವ್ ಚಾಲನೆ ನೀಡಿದರು. ತಾಲೂಕು ಯೋಜನಾಧಿಕಾರಿ ಕೆ.ಪಾತಲಿಂಗಪ್ಪ, ವಲಯ ಮೇಲ್ವಿಚಾರಕ ಚಂದ್ರಶೇಖರ್, ಕೃಷಿ ಮೇಲ್ವಿಚಾರಕ ಮಹದೇವಸ್ವಾಮಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯೋಗೇಶ್, ಕೆರೆ ಇಂಜಿನಿಯರ್ ಪುಷ್ಪರಾಜ್, ದೊಡ್ಡೇಕೊಪ್ಪಲು ಗ್ರಾಪಂ ಅಭಿವೃದ್ಧಿ ಅಧಿಕಾರಿ ರಮೇಶ್ ಇನ್ನಿತರರು ಇದ್ದರು.
ಕೆ.ಆರ್.ನಗರ ತಾಲೂಕಿನ ಅರಕೆರೆ ಗ್ರಾಮದಲ್ಲಿ ಅರಕೆರೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಸಮಿತಿ ವತಿಯಿಂದ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಅಗಸನ ಕೆರೆಯ ಹೂಳೆತ್ತುವ ಕಾಮಗಾರಿಗೆ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಮಮತಾ ರಾವ್ ಚಾಲನೆ ನೀಡಿದರು. ತಾಲೂಕು ಯೋಜನಾಧಿಕಾರಿ ಕೆ.ಪಾತಲಿಂಗಪ್ಪ, ವಲಯ ಮೇಲ್ವಿಚಾರಕ ಚಂದ್ರಶೇಖರ್, ಕೃಷಿ ಮೇಲ್ವಿಚಾರಕ ಮಹದೇವಸ್ವಾಮಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯೋಗೇಶ್, ಕೆರೆ ಇಂಜಿನಿಯರ್ ಪುಷ್ಪರಾಜ್, ದೊಡ್ಡೇಕೊಪ್ಪಲು ಗ್ರಾಪಂ ಅಭಿವೃದ್ಧಿ ಅಧಿಕಾರಿ ರಮೇಶ್ ಇನ್ನಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಮಮತಾ ರಾವ್ ಹೇಳಿಕೆ
  • ಅಗಸನ ಕೆರೆಯ ಹೂಳೆತ್ತುವ ಕಾಮಗಾರಿಗೆ ಚಾಲನೆ
ಕೆ.ಆರ್.ನಗರ: ಕಾಲಗಳು ಉರುಳಿದಂತೆ ಹನಿ ನೀರಿಗೂ ಪರದಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಪ್ರತಿಯೊಂದು ಜೀವಿಗೂ ನೀರಿನ ಅವಶ್ಯಕತೆ ಇದೆ. ಆದ್ದರಿಂದ ಜೀವಜಲದ ರಕ್ಷಣೆ ಆಗಬೇಕು. ಹಾಗಾಗಿ ಕೆರೆಗಳ ಪುನಶ್ಚೇತನದೊಂದಿಗೆ ನೀರನ್ನು ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಮಮತಾ ರಾವ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಅಭಿವೃದ್ಧಿ ಸಮಿತಿ ವತಿಯಿಂದ ಆಯೋಜಿಸಿದ್ದ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಅಗಸನ ಕೆರೆಯ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಸುಮಾರು ಅಂದಾಜು 60 ಕೋಟಿ ರೂ.ವೆಚ್ಚದಲ್ಲಿ 1043 ಕೆರೆಗಳನ್ನು ಸಂಸ್ಥೆ ಮುಖಾಂತರ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.
ಸಂಸ್ಥೆ ವತಿಯಿಂದ ಹೂಳು ತುಂಬಿಕೊಂಡಿರುವ ಕೆರೆಗಳನ್ನು ಆಯ್ಕೆ ಮಾಡಿ ಅಂತಹ ಕೆರೆಗಳ ಅಭಿವೃದ್ಧಿ ಜತೆಗೆ ಸಮಾಜಮುಖಿ ಕಾರ್ಯಕ್ರಮಗಳಾದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಆರೋಗ್ಯ ಅರಿವು ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದರು.
ಪುರಾತನ ಕಾಲದ ಕೆರೆಗಳನ್ನು ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ. ನೀರಿನ ಸಂಗ್ರಹಣೆ ಹಿನ್ನಡೆಯಿಂದಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿದೆ. ನೀರಿನ ಮೂಲಗಳನ್ನು ಅಭಿವೃದ್ಧಿಪಡಿಸಿ ಅಂತರ್ಜಲಮಟ್ಟ ಹೆಚ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಕಷ್ಟು ಜನಪರ ಯೋಜನೆಗಳನ್ನು ನಡೆಸುತ್ತಿದೆ. ಸರ್ವರೂ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಕೆ.ಪಾತಲಿಂಗಪ್ಪ ಮಾತನಾಡಿ, ಈಗಾಗಲೇ ಕೆ.ಆರ್.ನಗರ ತಾಲೂಕಿನಲ್ಲಿ ಕಾಳೇನಹಳ್ಳಿ, ಮಂಡಿಗನಹಳ್ಳಿ, ಕೆರೆಗಳನ್ನು ಹೂಳೆತ್ತಿ ಅಭಿವೃದ್ಧಿ ಪಡಿಸಲಾಗಿದ್ದು ಪ್ರಸ್ತುತ ಅರಕೆರೆ ಗ್ರಾಮದ ಅಗಸನ ಕೆರೆಯನ್ನು ಅಭಿವೃದ್ಧಿ ಪಡಿಸಲು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಕೆರೆ ಪುನಶ್ಚೇತನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯೋಗೇಶ್, ಕೆರೆ ಇಂಜಿನಿಯರ್ ಪುಷ್ಪರಾಜ್, ದೊಡ್ಡೇಕೊಪ್ಪಲು ಗ್ರಾಪಂ ಅಭಿವೃದ್ಧಿ ಅಧಿಕಾರಿ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷೆ ಸುನೀತಾರಾಮೇಗೌಡ, ಮುಖಂಡರಾದ ಅಶ್ವತ್ಥ್, ಭಾಸ್ಕರ್, ಪ್ರಭಾಕರ್, ಶಿವರಾಜು, ಮಾಲೇಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ವಲಯ ಮೇಲ್ವಿಚಾರಕ ಚಂದ್ರಶೇಖರ್, ಕೃಷಿ ಮೇಲ್ವಿಚಾರಕ ಮಹದೇವಸ್ವಾಮಿ, ಸೇವಾ ಪ್ರತಿನಿಧಿಗಳಾದ ರಮ್ಯಾ, ಪ್ರೀತಿ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net