ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ಖಂಡಿಸಿ ಪ್ರತಿಭಟನೆ

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಸಿಪಿಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಎಚ್.ಬಿ.ರಾಮಕೃಷ್ಣ, ಸಹ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಜೆ.ಶಿವಣ್ಣ, ಬಸವರಾಜು, ಕೃಷ್ಣೇಗೌಡ, ಎಂ.ಜಿ.ಪ್ರಸಾದ್ ಇನ್ನಿತರರಿದ್ದರು.
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಸಿಪಿಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಎಚ್.ಬಿ.ರಾಮಕೃಷ್ಣ, ಸಹ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಜೆ.ಶಿವಣ್ಣ, ಬಸವರಾಜು, ಕೃಷ್ಣೇಗೌಡ, ಎಂ.ಜಿ.ಪ್ರಸಾದ್ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಪಿಐನಿಂದ ಪುರಭವನ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ
  • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮದ ವಿರುದ್ಧ ಕಿಡಿ
ಮೈಸೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದಿಂದ ನಗರದ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಗುರುವಾರ ಪ್ರತಿಭಟಿಸಲಾಯಿತು. 
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕು. ವಿದ್ಯಾರ್ಥಿಗಳ ಧ್ವನಿಯನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನ ಪ್ರಜಾಪ್ರಭುತ್ವದ ಮೌಲ್ಯಕ್ಕೆ ವಿರುದ್ಧವಾಗಿದೆ.
 ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆ ನಿರ್ಲಕ್ಷಿೃಸಿ, ಪ್ರತಿಭಟನೆ ದಮನಿಸಲು ಕೈಗೊಂಡಿರುವ ಕೇಂದ್ರ ಸರ್ಕಾರದ ಕ್ರಮ ಹಾಗೂ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಖಂಡನೀಯ. ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು
ದೆಹಲಿ ಪೊಲೀಸರು ದೌರ್ಜನ್ಯವನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವದ ಹಕ್ಕು ಕಸಿಯುವ ಪ್ರಯತ್ನ  ಕೈಬಿಡಬೇಕು. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಬಾರದು. ಶಿಕ್ಷಣ ನಮ್ಮ ಹಕ್ಕು, ಅದನ್ನು ಕಸಿಯಲು ನಾವು ಬಿಡುವುದಿಲ್ಲ. ಹೋರಾಡುತ್ತಿರುವ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ದೇಶಾದ್ಯಂತ ಏಕತೆ ವ್ಯಕ್ತವಾಗಬೇಕು. ವಿದ್ಯಾರ್ಥಿ ವಿರೋಧಿ ಮತ್ತು ದಮನಕಾರಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು
ಸಂಘಟನೆಯ ಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ, ಸಹ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಜೆ.ಶಿವಣ್ಣ, ಬಸವರಾಜು, ಕೃಷ್ಣೇಗೌಡ, ಎಂ.ಜಿ.ಪ್ರಸಾದ್, ಶಬೀರ್, ಸಾದಿಕ್, ರಾಜು ಇನ್ನಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net