ಸಿಎಂ ತವರಲ್ಲಿ ಪ್ರತಿಭಟನೆ : ಒಳಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ

ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಶನಿವಾರ ವರುಣದಲ್ಲಿ ಜಾಥಾ ನಡೆಸಲು ಮುಂದಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಶನಿವಾರ ವರುಣದಲ್ಲಿ ಜಾಥಾ ನಡೆಸಲು ಮುಂದಾದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
Published on

ಪ್ರಮುಖ ಮುಖ್ಯಾಂಶಗಳು

  • ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿಗೆ ಆಗ್ರಹ
  • ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಜಾಥಾಕ್ಕೆ ಯತ್ನ
ಮೈಸೂರು: ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದಿಂದ ಮೈಸೂರಿಗೆ ಕಾಲ್ನಡಿಗೆ ಜಾಥಾ ನಡೆಸಲು ಮುಂದಾದ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ’ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.
ಜಾಥಾ ನಡೆಸಲು ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ ಸಮಿತಿ ಪದಾಧಿಕಾರಿಗಳು ಜಾಥಾ ನಡೆಸಲು ಮುಂದಾದ ಸಂದರ್ಭ ಪೊಲೀಸರು ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ವರುಣದಿಂದ ಜಾಥಾದಲ್ಲಿ ಹೊರಟು ತಿ.ನರಸೀಪುರ, ಬನ್ನೂರು, ವ್ಯಾಸರಾಯಪುರ ಮೂಲಕ ಮೈಸೂರಿಗೆ ಡಿ.11 ರಂದು ತಲುಪಿ ಮೈಸೂರಿನ ಪುರಭವನ ಆವರಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿತ್ತು.
ಒಳ ಮೀಸಲಾತಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಕೂಡಲೇ ಪೂರ್ಣ ಪ್ರಮಾಣದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net