ಕೆ.ಆರ್.ಕ್ಷೇತ್ರದ ಕಾಂಗ್ರೆಸ್‌ನಿಂದ ಪ್ರತಿಭಟನೆ

ರಾಮಸ್ವಾಮಿ ವೃತ್ತದಲ್ಲಿ ಗುರುವಾರ ಕಲ್ಪಿತ ಶವಯಾತ್ರೆಯ ಮೂಲಕ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಎಂ.ಕೆ.ಸೋಮಶೇಖರ್, ಜಿ.ಸೋಮಶೇಖರ್, ಟಿ.ಬಿ.ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಜೆ.ಗೋಪಿ, ಜೆ.ವಿನಯ್ ಕುಮಾರ್ ಇದ್ದರು.
ರಾಮಸ್ವಾಮಿ ವೃತ್ತದಲ್ಲಿ ಗುರುವಾರ ಕಲ್ಪಿತ ಶವಯಾತ್ರೆಯ ಮೂಲಕ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಎಂ.ಕೆ.ಸೋಮಶೇಖರ್, ಜಿ.ಸೋಮಶೇಖರ್, ಟಿ.ಬಿ.ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಜೆ.ಗೋಪಿ, ಜೆ.ವಿನಯ್ ಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಆಕ್ರೋಶ
ನೀಟ್-ಯುಜಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಸಾವಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಲ್ಪಿತ ಶವಯಾತ್ರೆಯ ಮೂಲಕ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ವತಿಯಿಂದ ರಾಮಸ್ವಾಮಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ದೇಶಾದ್ಯಂತ ನೀಟ್ ಹಗರಣದಿಂದ ಬೇಸತ್ತು ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಕೇಂದ್ರ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ, ನೀಟ್ ಹಗರಣ ನಿರ್ಲಕ್ಷ್ಯ ಮಾಡಿ ಹಲವಾರು ವಿದ್ಯಾರ್ಥಿಗಳ ಸಾವಿಗೆ ಕಾರಣರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕಲ್ಪಿತ ಶವಯಾತ್ರೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, 22 ಲಕ್ಷ ವಿದ್ಯಾರ್ಥಿಗಳು, ಅವರ ಪಾಲಕರ ಬದುಕಿನ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಮರು ಪರೀಕ್ಷೆಯ ಬೇಸರದಿಂದ ಕೆಲವು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.
ವಿದ್ಯಾರ್ಥಿಗಳ ಮಾನಸಿಕ ಮತ್ತು ಬೌದ್ಧಿಕ ಮಟ್ಟಕ್ಕೆ ಪೆಟ್ಟು ನೀಡುವಂತಹ ಕೆಟ್ಟ ಕೆಲಸ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ನಡೆದಿದೆ. ದೇಶ ವ್ಯಾಪ್ತಿಯಲ್ಲಿ ನೀಟ್ ಮತ್ತು ಇನ್ನಿತರ ಪ್ರವೇಶ ಪರೀಕ್ಷೆಗೆ ಪಾಲಕರು, ಕೋಟ್ಯಂತರ ರೂ.ಖರ್ಚು ಮಾಡುತ್ತಾರೆ. ಮಕ್ಕಳ ಪರಿಶ್ರಮ ಮತ್ತು ಪಾಲಕರ ಹಣ ವ್ಯರ್ಥ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು. ಒಂದು ಪರೀಕ್ಷೆ ನಡೆಸಲು ಸೈನ್ಯ ನಿಯೋಜನೆ ಮಾಡುವಂತಹ ಅಭದ್ರತೆಯ ಸರ್ಕಾರ ನಮ್ಮ ದೇಶದಲ್ಲಿದೆ ಎಂದು ಹೇಳಲು ನಾಚಿಕೆ ಪಡುವಂತಾಗಿದೆ. ವಿಶ್ವಗುರು ಎಂದು ಬೆನ್ನು ತಟ್ಟಿಕೊಳ್ಳುವ ಮೋದಿ ಅವರು ದೇಶದ ಮಕ್ಕಳಿಗೆ ನೀಡಿರುವ ಅತಿ ದೊಡ್ಡ ಪೆಟ್ಟು ಇದಾಗಿದ್ದು, ದೇಶದ ಇತಿಹಾಸದಲ್ಲಿ ಕಪ್ಪು ಚುಕ್ಕೆ ತಂದ ಕೀರ್ತಿ ಇವರದು ಎಂದು ದೂರಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸೋಮಶೇಖರ್, ಮಾಜಿ ಮೇಯರ್‌ಗಳಾದ ಟಿ.ಬಿ.ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ನಗರ ಪಾಲಿಕೆ ಮಾಜಿ ಸದಸ್ಯ ಜೆ.ಗೋಪಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜೆ.ವಿನಯ್ ಕುಮಾರ್, ಸದಸ್ಯ ಡೈರಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ರವಿಶಂಕರ್, ಜೋಗಿ ಮಹೇಶ್, ಅಶೋಕಪುರಂ ಮಂಜುನಾಥ್, ರಮೇಶ್, ಗುಣಶೇಖರ್, ಮಹ್ಮದ್ ಫಾರೂಖ್, ಸೋಮು ಕುರುಬಾರಳ್ಳಿ, ಆರ್.ಎಚ್.ಕುಮಾರ್, ಶ್ರೀಧರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net