ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ

ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜದ ಬೆಲೆ ಏರಿಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕೆರೆಹುಂಡಿ ರಾಜಣ್ಣ, ವಳಗೆರೆ ಗಣೇಶ್, ಎಚ್.ಗುಂಡ್ಲಾ ಚಿದಂಬರ,ಮಲಿಯೂರು ಮಹೇಂದ್ರ, ಗೌಡಿಕೆ ಸೋಮಣ್ಣ, ಮುದ್ದಳ್ಳಿ ಮಧು, ಸಿದ್ದರಾಮಪ್ಪ ಇತರರು ಇದ್ದರು.
ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜದ ಬೆಲೆ ಏರಿಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕೆರೆಹುಂಡಿ ರಾಜಣ್ಣ, ವಳಗೆರೆ ಗಣೇಶ್, ಎಚ್.ಗುಂಡ್ಲಾ ಚಿದಂಬರ,ಮಲಿಯೂರು ಮಹೇಂದ್ರ, ಗೌಡಿಕೆ ಸೋಮಣ್ಣ, ಮುದ್ದಳ್ಳಿ ಮಧು, ಸಿದ್ದರಾಮಪ್ಪ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೈತರ ಆದಾಯ ದ್ವಿಗುಣ ಮಾಡುವುದಾಗಿ ಘೋಷಣೆ ಮಾಡಿದ್ದ ಸರ್ಕಾರಗಳು ಈಗ ಬೆಲೆ ಏರಿಕೆ ಮಾಡುತ್ತಿವೆ
  • ಸರ್ಕಾರ ಪರ್ಯಾಯ ಮಾರ್ಗವನ್ನು ಕಂಡುಹಿಡಿದು ಇಂತಹ ರೈತರಿಗೂ ಸಬ್ಸಿಡಿ ದರಲ್ಲಿ ಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು
ಮೈಸೂರು:ರೈತರ ಆದಾಯ ದ್ವಿಗುಣ ಮಾಡುವುದಾಗಿ ಘೋಷಣೆ ಮಾಡಿದ್ದ ಸರ್ಕಾರಗಳು, ಈಗ ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜದ ದರ ಏರಿಕೆ ಮಾಡಿ ರೈತರನ್ನು ಶೋಷಣೆ ಮಾಡಲು ಹೊರಟಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಕಾಡಾ ಕಚೇರಿ ಆವರಣದಲ್ಲಿರುವ ಕೃಷಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಬೆಲೆ ಏರಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕ್ಕಾರ ಕೂಗಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿ ರೈತರನ್ನು ಕೃಷಿಯಿಂದ ಒಕ್ಕಲು ಎಬ್ಬಿಸುವ ಕೆಲಸ ಮಾಡುತ್ತೇವೆ. ರೈತರ ಕೃಷಿ ಆದಾಯವನ್ನು 2026ಕ್ಕೆ ದ್ವಿಗುಣ ಗೊಳಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಮಾಡಿ, ಈಗ ಕೃಷಿಗೆ ಅಗತ್ಯವಾದ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ ಎಂದು ದೂರಿದರು.
ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷದಿಂದ ದೇಶಕ್ಕೆ ಬರುವ ಶೇ. 50ರಷ್ಟು ಕೊರತೆಯಾಗುವ ಸಾಧ್ಯತೆ ಇದೆ. ಎಫ್‌ಐಡಿ ಇಲ್ಲದೆ ಬಗರು ಹುಕುಂ, ಇನಾಮತಿ ಜಮೀನುನನ್ನು ಗುತ್ತಿಗೆ ಮಾಡುವ ರೈತರ ಜಮೀನು, ಪೌತಿ ಖಾತೆ ಅಗದ ಜಮೀನಿಗೆ ರಾಸಾಯನಿಕ ಗೊಬ್ಬರ ಇಲ್ಲವಾಗಿದೆ. ಸರ್ಕಾರ ಪರ್ಯಾಯ ಮಾರ್ಗವನ್ನು ಕಂಡುಹಿಡಿದು ಇಂತಹ ರೈತರಿಗೂ ಸಬ್ಸಿಡಿ ದರಲ್ಲಿ ಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆ ಬಿತ್ತನೆ ಮಾಡಲು ನೀರಾವರಿ ವ್ಯವಸಾಯ ಮಾಡಲು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಸಧ್ಯದ ಪರಿಸ್ಥಿತಿಯಲ್ಲಿ ದಿಢೀರ್ ಎಂದು ಸಾವಯವ ಕೃಷಿ ಮಾಡಲು ಸಾಧ್ಯವಾಗುವುದಿಲ್ಲ. ಅದಕ್ಕೆ ಬೇಕಾದ ಮೂಲ ಸೌಕರ್ಯ, ಶೇಕಡ 50ರಷ್ಟು ಪ್ರೋತ್ಸಾಹ ಧನ ನೀಡುವಂತೆ ಆಗ್ರಹಿಸಿದರು.
ಕೃಷಿ ಯಂತ್ರೋಪಕರಣಗಳಿಗೆ ಡೀಸೆಲ್ ಮತ್ತು ಪೆಟ್ರೋಲ್ ಅಗತ್ಯವಿದ್ದು, ಅದರ ಬೆಲೆಯನ್ನು ಏರಿಕೆ ಮಾಡಲಾಗಿದೆ. ಅಲ್ಲದೇ ರೈತರು ಕೃಷಿ ಚಟುವಟಿಕೆಗೆ ಟ್ಯಾಕ್ಟರ್ ಟಿಲ್ಲರ್, ಬ್ರಷ್ ಕಟರ್, ಕಳೆ ತೆಗೆಯುವ ಯಂತ್ರಗಳನ್ನು ಪೆಟ್ರೋಲ್ ಬಂಕ್‌ಗಳಿಗೆ ತಂದು ಹಾಕಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕ್ಯಾನ್‌ಗಳಿಗೆ ಪೆಟ್ರೋಲ್ ಹಾಕುವುದಿಲ್ಲ ಎನ್ನುವ ನಿರ್ಬಂಧವನ್ನು ತೆಗೆದು ಕೃಷಿಗೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದರು.
ಅನ್‌ಲೈನ್ ಗೇಮ್ಗಳ ಮೂಲಕ ರೈತರ ಮಕ್ಕಳ ಬದುಕು ಹಾಳಾಗುತ್ತಿದ್ದು ತಕ್ಷಣ ಇಂತಹ ಆ್ಯಪ್‌ಗಳನ್ನು ನಿರ್ಬಂಧಿಸಬೇಕು. ತಕ್ಷಣ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಈ ಎಲ್ಲ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಖಜಾಂಚಿ ಕೆರೆಹುಂಡಿ ರಾಜಣ್ಣ, ಜಿಲ್ಲಾಧ್ಯಕ್ಷ ವಳಗೆರೆ ಗಣೇಶ್, ಮುಖಂಡರಾದ ಎಚ್.ಗುಂಡ್ಲಾ ಚಿದಂಬರ,ಮಲಿಯೂರು ಮಹೇಂದ್ರ, ಗೌಡಿಕೆ ಸೋಮಣ್ಣ, ಮುದ್ದಳ್ಳಿ ಮಧು, ಸಿದ್ದರಾಮಪ್ಪ, ಅಂಡುವಿನಹಳ್ಳಿ ಜಗದೀಶ್, ದೇವಣ್ಣ, ಮಹೇಶ್, ಗೌಡಿಕೆ ಶಿವಣ್ಣ, ದೇವಿರಮ್ಮನಹಳ್ಳಿ ಹುಂಡಿ ರೇವಣ್ಣ, ಸಂತು, ಮಹೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net