ದಸರಾದಲ್ಲಿ ಕಂಬಳ ಕ್ರೀಡೆ ಆಯೋಜನೆ ಕೈಬಿಡಬೇಕೆಂದು ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ, ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪ್ರತಿಭಟನೆ ನಡೆಯಿತು. ರಾಜಶೇಖರ್, ಡಿಪಿಕೆ ಪರಮೇಶ್, ಹರೀಶ್, ಸೋಮು, ಕುಮಾರ್ ಇನ್ನಿತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ದಸರಾದಲ್ಲಿ ಕಂಬಳ ಆಯೋಜನೆ ಕೈಬಿಡಲು ಆಗ್ರಹ
ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪ್ರತಿಭಟನೆ
ಮೈಸೂರು: ದಸರಾದಲ್ಲಿ ಕಂಬಳ ಕ್ರೀಡೆ ಆಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ, ಮೈಸೂರು ಹೃದಯವಂತ ಕನ್ನಡಿಗರ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು.
ಕಂಬಳ ಆಯೋಜನೆಗೆ ನಿಗದಿಪಡಿಸಿರುವ ಸ್ಥಳವಾದ ಸಾತಗಳ್ಳಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವೇದಿಕೆ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಕಂಬಳ ಅಥವಾ ಕರಾವಳಿ ಭಾಗದ ಯಾವುದೇ ಜನಪದ ಕ್ರೀಡೆಗೆ ವಿರೋಧ ಇಲ್ಲ. ಆದ್ದರಿಂದ ದಸರಾದಲ್ಲಿ ಮೈಸೂರಿನ ಪರಂಪರೆ ಮತ್ತು ಸಂಸ್ಕೃತಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಸುಮಾರು 8 ಕೋಟಿ ರೂ.ವೆಚ್ಚದಲ್ಲಿ ಕಂಬಳ ಆಯೋಜನೆ ಮಾಡುವ ಬದಲು, ಆ ಹಣವನ್ನು ರಾಜ್ಯದ ರೈತರ ಕಲ್ಯಾಣಕ್ಕೆ, ಕೃಷಿ ಅಭಿವೃದ್ಧಿಗೆ, ಕುಸ್ತಿ ಸೇರಿದಂತೆ ಸ್ಥಳೀಯ ಕ್ರೀಡೆಗಳಿಗೆ ಉತ್ತೇಜನಕ್ಕೆ, ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಕಲಾವಿದರಿಗೆ ಹೆಚ್ಚಿನ ಗೌರವಧನ, ಸೌಲಭ್ಯ ಕಲ್ಪಿಸಲು ಬಳಸಬೇಕು ಎಂದು ಒತ್ತಾಯಿಸಿದರು.
ಮೈಸೂರು ಹೃದಯವಂತ ಬಳಗದ ಅಧ್ಯಕ್ಷ ಡಿಪಿಕೆ ಪರಮೇಶ್ ಮಾತನಾಡಿ, ಯಾವುದೇ ಕಾರಣಕ್ಕೂ ದಸರಾದಲ್ಲಿ ಕಂಬಳಕ್ಕೆ ಅವಕಾಶ ನೀಡಬಾರದು.
ಜಂಬೂಸವಾರಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಬರುತ್ತಾರೆಯೇ ಹೊರತು, ಕಂಬಳ ವೀಕ್ಷಿಸಲು ಅಲ್ಲ. ಸರ್ಕಾರ ಜನರ ಭಾವನೆಗಳಿಗೆ ವಿರುದ್ಧವಾಗಿ ಯಾವುದೇ ಕಾರ್ಯಕ್ರಮ ಹೇರಬಾರದು. ಜನಾಭಿಪ್ರಾಯಕ್ಕೆ ಗೌರವ ನೀಡಬೇಕು ಎಂದು ಆಗ್ರಹಿಸಿದರು.