ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಬನ್ನಹಳ್ಳಿ ಸೋಮಣ್ಣ, ಎಚ್.ಡಿ.ಕೋಟೆಯ ಸಣ್ಣ ಕುಮಾರ್, ಅನುಷಾ, ತಿ.ನರಸೀಪುರದ ಬಸವರಾಜು, ಧಮ್ಮ ಅಶೋಕ ದಂಡಿಕೆರೆ ಇನ್ನಿತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಇತ್ತೀಚೆಗೆ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವ ದುಷ್ಕೃತ್ಯಗಳು ಹೆಚ್ಚಾಗುತ್ತಿರುವುದು ಆತಂಕಕಾರಿ. ಇದನ್ನು ಖಂಡಿಸಿ ದಲಿತರು ಪ್ರತಿಭಟನೆ ನಡೆಸಿದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡಿಲ್ಲ. ನಾಮ್ ಕಾವಸ್ತೆಗೆ ಪ್ರಕರಣ ದಾಖಲಿಸಲಾಗುತ್ತಿದೆ. ಆರೋಪಿ ಎರಡು ದಿನದಲ್ಲೇ ಜಾಮೀನು ಪಡೆದು ಹೊರ ಬರುತ್ತಿದ್ದಾರೆ. ಇದರಿಂದ ರಾಷ್ಟ್ರ ನಾಯಕನಿಗೆ ಅಪಮಾನ ಮಾಡಿದರೆ ಏನೂ ಆಗುವುದಿಲ್ಲ ಎಂಬು ಭಾವನೆ ಬರುತ್ತಿದೆ. ಇದರಿಂದ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿವೆ ಎಂದು ಕಿಡಿಕಾರಿದರು.
ಚಾಮರಾಜನಗರ ಜಿಲ್ಲೆ ಮಸಣಾಪುರ, ಮೈಸೂರು ತಾಲೂಕಿನ ವಾಜಮಂಗಲದಲ್ಲಿ ಇಂತಹ ಘಟನೆಗಳು ನಡೆದಿವೆ. ಇದು ಖಂಡನೀಯ ಜತೆಗೆ ಶೋಚನೀಯ ಸಂಗತಿಯಾಗಿದೆ. ಆದ್ದರಿಂದ ತಪ್ಪಿತಸ್ಥರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಅವರನ್ನು ರಾಜ್ಯದಿಂದಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಬನ್ನಹಳ್ಳಿ ಸೋಮಣ್ಣ, ಎಚ್.ಡಿ.ಕೋಟೆಯ ಸಣ್ಣ ಕುಮಾರ್, ಅನುಷಾ, ತಿ.ನರಸೀಪುರದ ಬಸವರಾಜು, ಧಮ್ಮ ಅಶೋಕ ದಂಡಿಕೆರೆ, ನಾಗರತ್ನ ಇನ್ನಿತರರಿದ್ದರು.