ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

 ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಕನಿಷ್ಠ 7 ಗಂಟೆಗಳ  ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೆ.ಆರ್.ನಗರ ತಾಲೂಕು ಘಟಕದಿಂದ ಪ್ರತಿಭಟನೆ ನಡೆಯಿತು.
ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಕನಿಷ್ಠ 7 ಗಂಟೆಗಳ ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೆ.ಆರ್.ನಗರ ತಾಲೂಕು ಘಟಕದಿಂದ ಪ್ರತಿಭಟನೆ ನಡೆಯಿತು.
Published on
ಕೆ.ಆರ್.ನಗರ : ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಕನಿಷ್ಠ 7 ಗಂಟೆಗಳ ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೆ.ಆರ್.ನಗರ ತಾಲೂಕು ಘಟಕದಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ಮೈಸೂರು-ಹಾಸನ ಮುಖ್ಯರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸಬರಾಜು ನಿಗಮದ ಮುಖ್ಯ ಕಚೇರಿ ಮುಂದೆ ಕೆಲಹೊತ್ತು ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು ಮತ್ತು ರೈತ ಮುಖಂಡರು ಸೆಸ್ಕ್ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್‌ಗೆ ಮನವಿ ಪತ್ರ ಸಲ್ಲಿಸಿದರು.
ಸಂಘದ ಅಧ್ಯಕ್ಷ ಎಂ.ಎಸ್.ನಟರಾಜು ಮಾತನಾಡಿ, ಕಳೆದ 2 ತಿಂಗಳಿನಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾದ ವಿದ್ಯುತ್ ದೊರೆಯದ ಕಾರಣ ರೈತರ ತೋಟಗಾರಿಕೆ ಬೆಳೆಗಳು ಒಣಗುತ್ತಿವೆ. ಇದರ ಜತೆಗೆ ಹಣ್ಣು -ತರಕಾರಿ ಬೆಳೆ ನೀರಿಲ್ಲದೆ ಹಾಳಾಗಿವೆ. ಮುಂದೆ ಮಳೆ ಬಿಳುವವರಿಗೂ ರೈತರಿಗೆ ಅನುಕೂಲ ಕಲ್ಪಿಸಲು ವಿದ್ಯುತ್ ಸರಬರಾಜಿನ ವ್ಯತ್ಯಯಾಗದಂತೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಸಲು ಆದ್ಯತೆ ನೀಡಬೇಕು ಈಗಗಾಲೇ ನೋಂದಾಯಿಸಿಕೊಂಡಿರುವ ರೈತರಿಗೆ ಹಣ ಕಟ್ಟಲು ಕಾಲವಕಾಶ ನೀಡಬೇಕು ಹಾಗೂ ಉಳಿದ ರೈತರು ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಎಲ್ಲರೂ ಸೋಲಾರ್ ಸೌಲಭ್ಯ ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿಂದಿದ್ದು, ಹಲವು ಕಂಬಗಳು ಶಿಥಿಲಗೊಂಡಿವೆ. ಇದರಿಂದ ಸಾರ್ವಜನಿಕರು ಮತ್ತು ರೈತರಿಗೆ ತೊಂದರೆಯಾಗುತ್ತದೆ. ಇದಕ್ಕೆ ಉದಾಹರಣೆ ಮಾರಗೌಡನಹಳ್ಳಿ ಗ್ರಾಮದಲ್ಲಿ ತಂತಿ ತುಳಿದು ರೈತನೋರ್ವ ಮೃತಪಟ್ಟಿರುವುದೇ ಸಾಕ್ಷಿಯಾಗಿದ್ದು, ಇತಂಹ ಅನಾಹುತಗಳು ನಡೆಯದಂತೆ ಎಚ್ಚರ ವಹಿಸಬೇಕೆಂದು ಆಗ್ರಹಿಸಿದರು.
ಸಂಘದ ಮಹಿಳಾ ರಾಜ್ಯ ಕಾರ್ಯದರ್ಶಿ ನೇತ್ರಾವತಿ, ತಾಲೂಕು ಗೌರವಾಧ್ಯಕ್ಷ ಸಿದ್ದೇಗೌಡ ಮಾತನಾಡಿದರು. ರೋಹಿತ್, ಕುಮಾರ್, ಜಿ.ಕೆ.ಹರೀಶ್, ಸುಜಾತಾ, ಎ.ಬಿ.ಬಸಪ್ಪ, ಮಹದೇವ್, ಕಾಳೇಗೌಡ, ಕುಬೇರಪ್ಪ, ಬಸಪ್ಪ, ಸೆಸ್ಕ್ ಎಇಇ ಅರ್ಕೇಶ್‌ಮೂರ್ತಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net