ಹುಲಿ ದಾಳಿ ತಡೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಕನ್ನಡ  ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಗ್ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು
ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಗ್ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು
Published on

ಪ್ರಮುಖ ಮುಖ್ಯಾಂಶಗಳು

  • ಅರಣ್ಯದಲ್ಲಿ ಪ್ರಾಣಿಗಳಿಗಾಗಿ ಆಹಾರ ಹಾಗೂ ನೀರು ಸಿಗುವಂತೆ ಮಾಡಬೇಕು. ಹೆಚ್ಚಿನ ಸಿಬ್ಬಂದಿ ನೇಮಿಸಲು ಸರ್ಕಾರ ಮುಂದಾಗಬೇಕು
  • ಬೆಳಗಾವಿಯ ರಾಣಿ ಚೆನ್ಮಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವು ಹಾಗೂ ಮೈಸೂರಿನ ಸರಗೂರು ತಾಲೂಕಿನಲ್ಲಿ ಹುಲಿ ದಾಳಿಯಿಂದ ಮೂವರ ಸಾವಿಗೆ ಅರಣ್ಯ ಇಲಾಖೆ ಬೇಜವಾಬ್ದಾರಿ ಕಾರಣ
  • ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ. ಸಿದ್ದರಾಮಯ್ಯ ಬಹಳ ಬುದ್ಧಿವಂತ ವ್ಯಕ್ತಿ. ಅವರನ್ನು ಸಿಎಂ ಸ್ಥಾನದಿಂದ ತೆಗೆದರೆ ಮಾತ್ರ ಕ್ರಾಂತಿ, ಹೋರಾಟ, ದಾಳಿಯಾಗಲಿದೆ. ಮುಂದಿನ ಚುನಾವಣೆಗೆ ಸಿದ್ದರಾಮಯ್ಯ ಬೇಕು
ಮೈಸೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಂಚಿನ ಪ್ರದೇಶದಲ್ಲಿ ಹುಲಿ ದಾಳಿ ಹೆಚ್ಚಾಗುತ್ತಿದೆ. ಹುಲಿ ದಾಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ  ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಗ್ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ಅರಣ್ಯದಲ್ಲಿ ಪ್ರಾಣಿಗಳಿಗಾಗಿ ಆಹಾರ ಹಾಗೂ ನೀರು ಸಿಗುವಂತೆ ಮಾಡಬೇಕು. ಹೆಚ್ಚಿನ ಸಿಬ್ಬಂದಿ ನೇಮಿಸಲು ಸರ್ಕಾರ ಮುಂದಾಗಬೇಕು. ಅರಣ್ಯ ಪ್ರದೇಶ ರಕ್ಷಣೆ ಮಾಡಬೇಕು. ಪ್ರಾಣಿಗಳಿಗೆ ನೀರು, ಆಹಾರ ಸೌಲಭ್ಯ ಮಾಡಬೇಕು. ಕಾಡಿನ ಸಮೀಪ ರೆಸಾರ್ಟ್, ಹೋಟೆಲ್ ಇರಬಾರದು. ಗಡಿಯಲ್ಲಿ ಮರಗಳ ಕಳ್ಳತನ ನಡೆಯುತ್ತಿದ್ದು ಇದನ್ನು ತಪ್ಪಿಸಲು ಅರಣ್ಯ ಇಲಾಖೆ ವಿಲವಾಗಿದೆ ಎಂದು ಕಿಡಿಕಾರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಬೆಳಗಾವಿಯ ರಾಣಿ ಚೆನ್ಮಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವು ಹಾಗೂ ಮೈಸೂರಿನ ಸರಗೂರು ತಾಲೂಕಿನಲ್ಲಿ ಹುಲಿ ದಾಳಿಯಿಂದ ಮೂವರ ಸಾವಿಗೆ ಅರಣ್ಯ ಇಲಾಖೆ ಬೇಜವಾಬ್ದಾರಿ ಕಾರಣ ಎಂದು ಆರೋಪಿಸಿದರು.
ಅರಣ್ಯ ಇಲಾಖೆ ಬೇಜವಾಬ್ದಾರಿಯಿಂದ ಹುಲಿ ಮತ್ತು ಮರಿಗಳು ಸಾವಾಗಿದೆ. ಕಾಡಿನಿಂದ ಬಂದು ಮೂವರನ್ನು ಹುಲಿ ಬಲಿ ಪಡೆದಿದೆ. ಇತ್ತೀಚೆಗೆ ಕಾಡಿನಲ್ಲಿ ಕಾರು, ಕಾರಿನಲ್ಲಿ ಗನ್ ಸಿಕ್ಕಿದೆ. ಇಷ್ಟೊಂದು ಅವಘಡಗಳು ನಡೆಯುತ್ತಿದ್ದರೂ, ಅರಣ್ಯ ಇಲಾಖೆ ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ. ಪ್ರಾಣಿಗಳು ಕಾಡಿನಿಂದ ಆಚೆ ಬಾರದಂತೆ ಬಿಗಿ ಕ್ರಮಗಳನ್ನು  ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

2028ಕ್ಕೂ ಸಿದ್ದರಾಮಯ್ಯನೇ ಬೇಕು

ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ. ಸಿದ್ದರಾಮಯ್ಯ ಬಹಳ ಬುದ್ಧಿವಂತ ವ್ಯಕ್ತಿ. ಅವರನ್ನು ಸಿಎಂ ಸ್ಥಾನದಿಂದ ತೆಗೆದರೆ ಮಾತ್ರ ಕ್ರಾಂತಿ, ಹೋರಾಟ, ದಾಳಿಯಾಗಲಿದೆ. ಮುಂದಿನ ಚುನಾವಣೆಗೆ ಸಿದ್ದರಾಮಯ್ಯ ಬೇಕು. ಇವರಿಗೆ ಹೋಲುವ ವ್ಯಕ್ತಿಗಳು ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಲ್ಲಿ ಇಲ್ಲ. ಸಿದ್ದರಾಮಯ್ಯರನ್ನು ತೆಗೆಯುವ ಪ್ರಶ್ನೆ ಇಲ್ಲ. ಇವರು ಭದ್ರವಾಗಿ ಇರುತ್ತಾರೆ. 2028ರ ಚುನಾವಣೆಗೆ ಅವರು ಬೇಕು ಎಂದರು.
ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಟಾಡಿಕೆ ಇದೆ. ಎಂಇಎಸ್ ಸಂಘಟನೆ ನಿಷೇಧಿಸಬೇಕು. ಕರಾಳ ದಿನಾಚರಣೆಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದರು.
ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ಶಿವಶಂಕರ್, ಪಾರ್ಥಸಾರಥಿ, ತೇಜಸ್ ಲೋಕೇಶ್ ಗೌಡ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net