ಸರ್ಕಾರಿ ಶಾಲೆ ವಿಲೀನ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ

ಬೆಳವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೂರ್ಗಳ್ಳಿ ಶಾಲೆಯೊಂದಿಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಭಾನುವಾರ  ಪ್ರತಿಭಟನೆ ನಡೆಯಿತು.
ಬೆಳವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೂರ್ಗಳ್ಳಿ ಶಾಲೆಯೊಂದಿಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಯಿತು.
Published on
ಮೈಸೂರು: ಬೆಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೂರ್ಗಳ್ಳಿ ಶಾಲೆಗೆ ವಿಲೀನಗೊಳಿಸಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾನುವಾರ ಪ್ರತಿಭಟಿಸಿದರು.
ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ಮುಚ್ಚಲು ಮುಂದಾಗಿರುವುದು ವಿಷಾದನೀಯ, ಇದಕ್ಕೆ ಪಾಲಕರು ಅವಕಾಶ ನೀಡಬಾರದು ಎಂದು ಹೇಳಿದರು.
ಪ್ರತಿ ಹಳ್ಳಿಗೂ ಶಾಲೆ ಅವಶ್ಯಕವಾಗಿದ್ದು, ಒಂದೇ ಮಗುವಿದ್ದರೂ ಶಾಲೆ ನಡೆಸುತ್ತೇವೆಂದು ಶಿಕ್ಷಣ ಸಚಿವರು ಹೇಳುತ್ತಿದ್ದಾರೆ. ಆದರೆ, 5 ಕಿ.ಮೀ. ವ್ಯಾಪ್ತಿಯ ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗೆ ಸೇರಿಸಬೇಕೆಂದು ಆದೇಶ ಹೊರಡಿಸಿದ್ದಾರೆ. ಇದು ರಾಜ್ಯದ ಜನತೆಗೆ ಮಾಡಿರುವ ವಿಶ್ವಾಸ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥ ನಂಜುಂಡ ಮಾತನಾಡಿ, ನಮ್ಮ ಗ್ರಾಮದಲ್ಲಿ ವಾಸವಾಗಿರುವುದು ಸಾವಿರಾರು ಬಡ ವರ್ಗದವರ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆ ಅವಶ್ಯಕ. ನಾವು ಸಹ ಇದೇ ಶಾಲೆಯಲ್ಲಿ ಓದಿ ಬೆಳೆದವರು/ ಈ ಊರಿನ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಎಐಡಿಎಸ್‌ಒ ಪದಾಧಿಕಾರಿಗಳಾದ ಹೇಮಲತಾ, ನಂದೀಶ್, ಸೀಮಾ, ಸುನಿಲ್, ಆಸಿಯಾ, ನಿರಂಜನ್, ಗ್ರಾಮಸ್ಥರಾದ ದಿವಾಕರ್, ಮಂಜುನಾಥ್, ಕಿಶೋರ್, ಶ್ರೀನಿವಾಸ್, ರವಿ, ರೀತು, ನಾಗರಾಜು ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net