ಕಾರ್ಮಿಕ ಸಂಹಿತೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ

 ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಮುಖಂಡರು ಬುಧವಾರ ಮೈಸೂರು ನಗರದ ಗಾಂಧಿ ಚೌಕದಲ್ಲಿ ಪ್ರತಿಭಟಿಸಿದರು.
ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಮುಖಂಡರು ಬುಧವಾರ ಮೈಸೂರು ನಗರದ ಗಾಂಧಿ ಚೌಕದಲ್ಲಿ ಪ್ರತಿಭಟಿಸಿದರು.
Published on
ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆ ವಿರೋಧಿಸಿ ಬುಧವಾರ ಕಾರ್ಮಿಕ ಸಂಘಟನೆಗಳ ಮುಖಂಡರು ನಗರದ ಗಾಂಧಿ ಚೌಕದಲ್ಲಿ ಪ್ರತಿಭಟಿಸಿದರು.
ಕಾರ್ಮಿಕ ಸಂಹಿತೆ ಕಾರ್ಮಿಕರಿಗೆ ಮರಣ ಶಾಸನವಾಗಿದೆ. ಈ ಹಿನ್ನೆಲೆಯಲ್ಲಿ ಕರಾಳ ದಿನಾಚರಣೆ ಆಯೋಜಿಸಲಾಗುತ್ತಿದೆ. ಕೇಂದ್ರ ಸರ್ಕಾರ ಈ ದೇಶದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕ ವರ್ಗವನ್ನು ಸಂಪೂರ್ಣವಾಗಿ ಕಡೆಗಣಿಸಿ ಅವರನ್ನು ಮಾಲೀಕರ ಗುಲಾಮರನ್ನಾಗಿ ಮಾಡುವ ಮತ್ತು ಮಾಲೀಕರಿಗೆ ಪರಮಾಧಿಕಾರ ನೀಡುವ ಹುನ್ನಾರದ ಭಾಗವಾಗಿ ಸ್ವಾತಂತ್ರೃ ಪೂರ್ವದಿಂದಲೂ ಜಾರಿಯಲ್ಲಿದ್ದ 29 ಕಾರ್ಮಿಕ ಕಾಯ್ದೆ ರದ್ದುಪಡಿಸಿ ಹೊಸದಾಗಿ 4 ಕಾರ್ಮಿಕ ಸಂಹಿತೆಗಳಾಗಿ ಮಾರ್ಪಡಿಸಿದ್ದಾರೆ ಎಂದು ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಇದ್ದಂತಹ ಎಲ್ಲ ಕಾರ್ಮಿಕ ಕಾಯ್ದೆಗಳ ಬದಲಾವಣೆಯಾಗಿ ಕಾರ್ಮಿಕರ ಹಕ್ಕು ಬಾಧ್ಯತೆಗಳನ್ನು ಕಡೆಗಣಿಸಲಾಗಿದೆ. ಇದರಿಂದ ಮಾಲೀಕರಿಗೆ ಕಾರ್ಮಿಕರ ಮೇಲೆ ಪ್ರಹಾರ ಮಾಡಲು ಅವಕಾಶ ಮಾಡಿಕೊಡಲಾಗಿದೆ. 100ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುವ ಕೈಗಾರಿಕೆ ಮುಚ್ಚಬೇಕಾದರೆ ಸರ್ಕಾರದ ಅನುಮತಿ ಅವಶ್ಯಕವಿತ್ತು. ಆದರೆ, ಇದೀಗ ಈ ಸಂಖ್ಯೆಯನ್ನು 300ಕ್ಕೆ ಏರಿಸಿರುವುದರಿಂದ ರಾಜ್ಯದಲ್ಲಿ ಶೇ.75ರಷ್ಟು ಕೈಗಾರಿಕೆಗಳಲ್ಲಿ 300ಕ್ಕಿಂತ ಕಡಿಮೆ ಕಾಯಂ ಕಾರ್ಮಿಕರಿರುವುದರಿಂದ ಕೈಗಾರಿಕೋ ದ್ಯಮಿಗಳು ಯಾವಾಗ ಬೇಕಾದರೂ ಅವರ ಕೈಗಾರಿಕೆ ಮುಚ್ಚುವ ಅಥವಾ ವರ್ಗಾವಣೆ ಮಾಡುವ ಅವಕಾಶ ದೊರೆಯುವುದರಿಂದ ಕಾರ್ಮಿಕರ ಕೆಲಸದ ಭದ್ರತೆಗೆ ಧಕ್ಕೆ ಬಂದಿದೆ ಎಂದು ಅವರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಬಾಲಾಜಿ ರಾವ್, ಚಂದ್ರಶೇಖರ ಮೇಟಿ, ಜವರಯ್ಯ, ಎನ್.ಕೆ. ದೇವದಾಸ್, ಅಣ್ಣಪ್ಪ, ಆನಂದರಾಜ್, ಎಚ್.ಬಿ. ರಾಮಕೃಷ್ಣ, ಜಯರಾಮು, ಉಗ್ರ ನರಸಿಂಹೇಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net