ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಸಚಿವ ಸತೀಶ್ ಜಾರಕಿಹೊಳಿ ಮೇಲೆ ನಡೆದ ಇಡಿ ದಾಳಿ ಖಂಡಿಸಿ ದಲಿತ ಮಹಾ ಸಭಾದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಸಚಿವ ಸತೀಶ್ ಜಾರಕಿಹೊಳಿ ಮೇಲೆ ನಡೆದ ಇಡಿ ದಾಳಿ ಖಂಡಿಸಿ ದಲಿತ ಮಹಾ ಸಭಾದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
Published on
ಮೈಸೂರು: ರಾಜಕೀಯ ಪ್ರೇರಿತವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಆರೋಪಿಸಿ ದಲಿತ ಮಹಾ ಸಭಾ ವತಿಯಿಂದ ನಗರದ ಪುರಭವನ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.
ಸತೀಶ್ ಜಾರಕಿಹೊಳಿ ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುತ್ತಾರೆ ಎಂಬ ಭೀತಿಯಿಂದ ರಾಜಕೀಯ ಪ್ರೇರಿತವಾಗಿ ‘ಇಡಿ’ ದಾಳಿ ನಡೆಸಲಾಗಿದೆ. ಕೇಂದ್ರ ಸರ್ಕಾರ ಈ ರೀತಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ದಲಿತ ಮಹಾಸಭಾ ಅಧ್ಯಕ್ಷ ರಾಜೇಶ್ ಆಕ್ರೋಶ ವ್ಯಕ್ತಪಡಿಸಿದರು.
ಸತೀಶ್ ಜಾರಕಿಹೊಳಿ ಮಾನವ ಬಂಧುತ್ವ ವೇದಿಕೆಯ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೊಡಗುವ ಸಾವಿರಾರು ವಿದ್ಯಾರ್ಥಿಗಳಿಗೆ ನೆರವು ನೀಡಿದ್ದಾರೆ. ಅವರ ಏಳಗೆಯನ್ನು ಸಹಿಸದೆ ಅವರನ್ನು ರಾಜಕೀಯವಾಗಿ ಹತ್ತಿಕ್ಕಲು ಯತ್ನಿಸುತ್ತಿರುವುದು ಖಂಡನೀಯ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ದೇವಪ್ಪನಾಯಕ, ಬಸವರಾಜು, ಪುರುಷೋತ್ತಮ, ತುಂಬಲ ರಾಮಣ್ಣ, ಶ್ರೀನಿವಾಸ್, ಲೋಕೇಶ್ ಪಿಯಾ, ತಿಪ್ಪೂರು ಮಹದೇವು, ಶ್ರೀನಿವಾಸ್, ಎಸ್.ಆರ್. ರವಿ ಹಾಗೂ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net