ತೆರಿಗೆ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ತೆರಿಗೆ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆಯಿಂದ ನಗರಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಬಾಲಕೃಷ್ಣ, ನಾಲಾ ಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಚಾಮರಾಜು ಮಂಡಕಳ್ಳಿ, ಹರೀಶ್ ಇತರರು ಇದ್ದರು.
ತೆರಿಗೆ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆಯಿಂದ ನಗರಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಬಾಲಕೃಷ್ಣ, ನಾಲಾ ಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಚಾಮರಾಜು ಮಂಡಕಳ್ಳಿ, ಹರೀಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜೀವನ ನಡೆಸುವುದು ಕಷ್ಟಕರವಾಗಿದೆ
  • ತೈಲ, ಗ್ಯಾಸ್ ಸರಿಯಾಗಿ ದೊರೆಯದೆ ಜನರು ಸಂಕಷ್ಟದಲ್ಲಿ ಇದ್ದಾರೆ.
ಮೈಸೂರು: ತೆರಿಗೆ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆಯಿಂದ ನಗರಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಪಾಲಿಕೆ ತೆರಿಗೆ ದರ ಏರಿಕೆ ವಿರುದ್ಧ ವೇದಿಕೆ ಕಾರ್ಯಕರ್ತರು ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.
ಇರಾನ್-ಇಸ್ರೇಲ್, ಅಮೆರಿಕ ನಡುವೆ ಯುದ್ಧ ನಡೆಯುತ್ತಿದ್ದು, ತೈಲ, ಗ್ಯಾಸ್ ಸರಿಯಾಗಿ ದೊರೆಯದೆ ಜನರು ಸಂಕಷ್ಟದಲ್ಲಿ ಇದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ದೂರಿದರು.
ಈ ಕೂಡಲೇ ತೆರಿಗೆ ಹೆಚ್ಚಳ ಕೈ ಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಮುಖಂಡರಾದ ಬಾಲಕೃಷ್ಣ, ನಾಲಾ ಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಚಾಮರಾಜು ಮಂಡಕಳ್ಳಿ, ಹರೀಶ್, ಚಿನ್ನಪ್ಪ, ಶಿವುಗೌಡ, ಮಾದಪ್ಪ, ಸುನೀಲ್, ಗೋಪಿ, ಗೈಡ್ ಸ್ವಾಮಿ, ಬೀಡಾ ಬಾಬು, ಗೋವಿಂದರಾಜು, ರಮೇಶ್, ಸಿದ್ದಪ್ಪ, ಎಲ್ಐಸಿ ಹೊನಕೆರೆ ಸ್ವಾಮಿ, ನಾಗರಾಜು, ರೈತ ಪರ್ವ ಅಧ್ಯಕ್ಷ ಅರುಣ್ ಕುಮಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net