ಜರೂರಾಗಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ರಾಜಶೇಖರ್, ಖಜಾಂಜಿ  ನಂಜುಂಡ, ಹರೀಶ್, ಕಿಕ್ಕೇರಿ ಕಿರಣ , ಹೊನ್ನೇಗೌಡ, ಜಿ.ತಾರಾ, ವತ್ಸಲಾ, ರಶ್ಮಿಸಿಂಗ್, ಇ.ವಿ. ನಾಗರಾಜ್, ಕಿರಣ, ರವಿಗೌಡ, ಶೋಭಾ ಇತರರು ಇದ್ದರು.
ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ರಾಜಶೇಖರ್, ಖಜಾಂಜಿ ನಂಜುಂಡ, ಹರೀಶ್, ಕಿಕ್ಕೇರಿ ಕಿರಣ , ಹೊನ್ನೇಗೌಡ, ಜಿ.ತಾರಾ, ವತ್ಸಲಾ, ರಶ್ಮಿಸಿಂಗ್, ಇ.ವಿ. ನಾಗರಾಜ್, ಕಿರಣ, ರವಿಗೌಡ, ಶೋಭಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಯೋಜನೆ ಕೈಗೆತ್ತಿಕೊಂಡು ಕಾಮಗಾರಿ ಪ್ರಾರಂಭಿಸಬೇಕು
  • ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಇದರಿಂದ ರಾಜ್ಯದ ಜನರಿಗೆ ಅನುಕೂಲ
ಮೈಸೂರು:ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಹಳೆ ಕಟ್ಟಡದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕನಕಪುರದ ಮೇಕೆದಾಟು ಬಳಿ ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮದ ಬಳಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಇದರಿಂದ ರಾಜ್ಯದ ಜನರಿಗೆ ಅನುಕೂಲವಾಗಲಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಮೇಕೆದಾಟು ಯೋಜನೆಗೆ ತಡೆ ಹಾಕಿದ ತಮಿಳುನಾಡು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಗಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಯೋಜನೆ ಕೈಗೆತ್ತಿಕೊಂಡು ಕಾಮಗಾರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮೇಕೆದಾಟು ಯೋಜನೆಗಾಗಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಈಗ ಅವರೇ ಮುಖ್ಯಮಂತ್ರಿ ಆಗಿರುವ ಕಾರಣ ಅವರ ಕನಸಿನ ಕೂಸಾದ ಈ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ಕೋರಿದರು.
ತಮಿಳುನಾಡಿಗೆ ಹೆಚ್ಚುವರಿಯಾಗಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳುವುದು ಕನ್ನಡಿಗರ ಹಕ್ಕು. ಬೇಸಿಗೆಯಲ್ಲಿ ಬೆಂಗಳೂರಿನ ನೀರಿನ ಸಮಸ್ಯೆಗೆ ಇದು ಶಾಶ್ವತ ಪರಿಹಾರವಾಗಲಿದ್ದು, ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣಕ್ಕೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ಪ್ರತಿಪಾದಿಸಿದರು.
ಕನ್ನಡಾಂಬೆ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್, ಖಜಾಂಜಿ ನಂಜುಂಡ, ಮುಖಂಡಾದ ಹರೀಶ್, ಕಿಕ್ಕೇರಿ ಕಿರಣ , ಹೊನ್ನೇಗೌಡ, ಜಿ.ತಾರಾ, ವತ್ಸಲಾ, ರಶ್ಮಿಸಿಂಗ್, ಇ.ವಿ. ನಾಗರಾಜ್, ರವಿಗೌಡ, ಶೋಭಾ, ಸೋಮಶೇಖರ್, ಬೆಟ್ಟೆಗೌಡ, ಇಂದ್ರಮ್ಮ, ಶಶಿಕಲಾ, ದಿವ್ಯಾರಾಣಿ, ವಿಷ್ಣ್ಣು, ಗಿರಿಜಾ, ಸಿಂಧುವಳ್ಳಿ ಶಿವಕುಮಾರ್, ಮಹೇಂದ್ರ, ರವಿಕಾಂತ ಹೇಮಾವತಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net