ಮೈಸೂರು: ರಾಜೇಂದ್ರ ನಗರ ಕೆಸರೆ ಕುರಿಮಂಡಿಯ ಪರಿಶಿಷ್ಟ ಸಮುದಾಯದವರ ಮೇಲೆ ನರಸಿಂಹರಾಜ ಠಾಣೆ ಪೊಲೀಸರು ದೌರ್ಜನ್ಯ ಎಸಗಿದ್ದು, ಇವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇದನ್ನು ಖಂಡಿಸಿ ಫೆ.18ರಂದು ಬೆಳಗ್ಗೆ 10ಕ್ಕೆ ಗಾಂಧಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕುರಿಮಂಡಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಭೀಮ್ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಮಂಜುನಾಥ್ ತಿಳಿಸಿದರು.