ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಎಲ್ಲ ರೆಸಾರ್ಟ್ ಹಾಗೂ ಹೋಂಸ್ಟೇ ಮಾಲೀಕರು, ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿದ ಅವರು, ಕೊಡಗಿನ ಹೋಂಸ್ಟೇ ಒಂದರಲ್ಲಿ ಅಲ್ಲಿನ ಸಿಬ್ಬಂದಿ ಇಬ್ಬರು ವಿದೇಶಿ ಪ್ರವಾಸಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ವಿಚಾರ ಬೆಳಕಿಗೆ ಬಂದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಗಿದೆ. ಹೀಗಾಗಿ, ಇಲಾಖೆ ಮುಂಜಾಗ್ರತಾ ಕ್ರಮ ವಹಿಸಿದ್ದು, ನಿಮ್ಮ ರೆಸಾರ್ಟ್‌ಗಳಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿ ಪೊಲೀಸ್ ವೆರಿಫಿಕೇಶನ್ ಮಾಡಿಸಬೇಕು. ಸೇವಾಸಿಂಧು ಮೂಲಕ ಅವರ ವೆರಿಫಿಕೇಶನ್ ಮಾಡಬಹುದಾಗಿದ್ದ ಕೂಡಲೇ ನಿಮ್ಮ ಸಿಬ್ಬಂದಿಗೆ ತಿಳಿಸಿ ಎಂದು ಸೂಚಿಸಿದರು.