ಅಂಗವಿಕಲರಿಗೆ ಅಗತ್ಯ ಸಲಕರಣೆ ಒದಗಿಸಿ ಮಾನಸಿಕ ಸಾಮರ್ಥ್ಯ ಹೆಚ್ಚಿಸಿ
ಹುಣಸೂರು ನಗರೆದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲ ಮಕ್ಕಳಿಗೆ ಸಾಧನ-ಸಲಕರಣೆಗಳನ್ನು ಶಾಸಕ ಜಿ.ಡಿ.ಹರೀಶ್‌ಗೌಡ ವಿತರಿಸಿದರು. ಡಾ.ಪುಷ್ಪಾ ಅಮರನಾಥ್, ತಹಸೀಲ್ದಾರ್ ಜೆ.ಮಂಜುನಾಥ್,ತ್ರಿನೇಶ್, ಪ್ರಭಾಕರ್ ಇತರರಿದ್ದರು.
ಹುಣಸೂರು:2025-26ನೇ ಸಾಲಿನ ಮೌಲ್ಯಾಂಕನ ಶಿಬಿರದಲ್ಲಿ ಆಯ್ಕೆಯಾದ 59 ಅಂಗವಿಕಲ ಮಕ್ಕಳಿಗೆ ಶಾಲಾ ಶಿಕ್ಷಣ ಇಲಾಖೆ ಮತ್ತು ಅಲಿಂಕೋ ಸಂಸ್ಥೆ ಸಹಯೋಗದಲ್ಲಿ ಸಾಧನ-ಸಲಕರಣೆಗಳನ್ನು ವಿತರಿಸಲಾಯಿತು.
ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಂಗವಿಕಲ ಮಕ್ಕಳಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಸಾಧನ-ಸಲಕರಣೆಗಳನ್ನು ವಿತರಿಸಿ ಮಾತನಾಡಿ, ಅಂಗವಿಕಲ ಮಕ್ಕಳಿಗೆ ಸಾಧನ-ಸಲಕರಣೆಗಳನ್ನು ನೀಡುವುದರೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ ಆಗಬೇಕಿದೆ. ಸ್ವಾವಲಂಬಿಗಳಾಗಿ ಬದುಕಬೇಕೆನ್ನುವ ಅವರ ಆಸೆಯನ್ನು ಅರ್ಥ ಮಾಡಿಕೊಂಡು ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರು(ಬಿಐಇಆರ್‌ಟಿ) ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಾಳನಾಯಕ ಮಾತನಾಡಿ, ಕಳದ ಸಾಲಿನ ಮೌಲ್ಯಾಂಕನ ಶಿಬಿರದಲ್ಲಿ ಒಟ್ಟು 172 ಮಕ್ಕಳು ಭಾಗವಹಿಸಿದ್ದರು. ಈ ಪೈಕಿ ಸಾಧನ ಸಲಕರಣಗಳಿಗೆ ಒಟ್ಟು 82 ಮಕ್ಕಳು ಆಯ್ಕೆಯಾಗಿದ್ದು, ಈ ಪೈಕಿ ಮೊದಲ ಹಂತವಾಗಿ 59 ಮಕ್ಕಳಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ತಹಸೀಲ್ದಾರ್ ಜೆ.ಮಂಜುನಾಥ್, ಬಿಐಆರ್‌ಟಿಇಗಳಾದ ತ್ರಿನೇಶ್, ಪ್ರಭಾಕರ್, ಸೋಮಶೇಖರ್, ಯೋಗೇಶ್ವರಿ ಇತರರಿದ್ದರು.