ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ

 ಬೆಟ್ಟದಪುರ ಸಮೀಪದ ರಾಜನಬಿಳಗೂಲಿಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಿಧಾನ ಪೀಠಿಕೆ ಬೋಧಿಸಿದರು. ನಿತಿನ್ ವೆಂಕಟೇಶ್, ಮರೀಗೌಡ, ಸರಸ್ಪತಿ, ವಿದ್ಯಾಶಂಕರ್, ಗೀತಾ, ಮಹದೇವ್ ಇತರರು ಇದ್ದರು.
ಬೆಟ್ಟದಪುರ ಸಮೀಪದ ರಾಜನಬಿಳಗೂಲಿಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಿಧಾನ ಪೀಠಿಕೆ ಬೋಧಿಸಿದರು. ನಿತಿನ್ ವೆಂಕಟೇಶ್, ಮರೀಗೌಡ, ಸರಸ್ಪತಿ, ವಿದ್ಯಾಶಂಕರ್, ಗೀತಾ, ಮಹದೇವ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ನಾಗಲಕ್ಷ್ಮೀ ಚೌಧರಿ ಸಲಹೆ
  • ರಾಜನಬಿಳಗೂಲಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಬೆಟ್ಟದಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆಸೆಯಂತೆ ನಾವೆಲ್ಲರೂ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಅಂಬೇಡ್ಕರ್ ಕಂಡ ಕನಸು ನನಸಾಗಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಭಿಪ್ರಾಯಪಟ್ಟರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ರಾಜನಬಿಳಗೂಲಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಗ್ರಾಮಸ್ಥರ ವತಿಯಿಂದ ಗುರುವಾರ ಆಯೋಜಿಸಿದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇಂದು ನಾವೆಲ್ಲರೂ ಸುಖಕರ ಜೀವನ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಪ್ರಮುಖ ಕಾರಣಕರ್ತರು ಅಂಬೇಡ್ಕರ್. ಎಲ್ಲರೂ ಸಮಾನವಾಗಿ, ಸ್ವಾಭಿಮಾನದಿಂದ ಬದುಕುವ ಮೂಲಕ ನಾವೆಲ್ಲರೂ ಅವರಿಗೆ ಚಿರಋಣಿಯಾಗಿರಬೇಕಾಗಿದೆ ಎಂದರು.
ಅಂಬೇಡ್ಕರ್ ನೀಡಿದ ಶಿಕ್ಷಣವೇ ಇಂದು ನನ್ನನ್ನು ಈ ಸ್ಥಾನಕ್ಕೆ ತೆಗೆದುಕೊಂಡು ಬಂದಿದೆ. ಕಡು ಬಡತನದಲ್ಲಿ ಬೆಳೆದ ಅಂಬೇಡ್ಕರ್ ಸಾಕಷ್ಟು ನೋವುಗಳನ್ನು ಅನುಭವಿಸಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದ ಮಹಾನ್ ವ್ಯಕ್ತಿ. ಅವರು ಹಾಕಿಕೊಟ್ಟ ಸಂವಿಧಾನ ಮಾದರಿಯಾಗಿದೆ ಎಂದರು.
ಗ್ರಾಮಕ್ಕೆ ಡಾ.ನಾಗಲಕ್ಷ್ಮೀ ಆಗಮಿಸುತ್ತಿದ್ದಂತೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವೇದಿಕೆಯಲ್ಲಿ ಬಾಗಿನ ನೀಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಶ್ರಯ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮುಖಂಡರಾದ ಮರೀಗೌಡ, ಸರಸ್ಪತಿ, ವಿದ್ಯಾಶಂಕರ್, ಗೀತಾ, ಮಹದೇವ್, ವೆಂಕಟೇಶ್ ಸೇರಿದಂತೆ ಯುವಕರ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.
16ಬಿಟಿಪಿ01:
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net