ಗ್ರಾಮೀಣ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿ

ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಕೆ.ಸವಿತಾ, ಡಾ.ಡಿ.ಎಸ್.ಪ್ರತಿಮಾ, ಡಾ.ಸಿ.ನಟರಾಜ್, ಎ.ಬಿ.ನಾಗೇಂದ್ರ ಪ್ರಸಾದ್ ಇತರರಿದ್ದರು.
ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಕೆ.ಸವಿತಾ, ಡಾ.ಡಿ.ಎಸ್.ಪ್ರತಿಮಾ, ಡಾ.ಸಿ.ನಟರಾಜ್, ಎ.ಬಿ.ನಾಗೇಂದ್ರ ಪ್ರಸಾದ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮೈಸೂರು ವಿವಿ ಕುಲಸಚಿವೆ ಎಂ.ಕೆ.ಸವಿತಾ ಸಲಹೆ
  • ಪ್ರಾಧ್ಯಾಪಕರಲ್ಲಿ ಶಿಸ್ತು ಮತ್ತು ಬದ್ಧತೆ ಅತ್ಯಗತ್ಯ
  • ಶಿಕ್ಷಣ ವ್ಯವಸ್ಥೆಯಲ್ಲಿ ಪರಿಪೂರ್ಣ ವಿದ್ಯಾರ್ಥಿಗಳು ಸೃಷ್ಟಿಯಾಗಬೇಕು
ಮೈಸೂರು; ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಜ್ಞಾನ, ಶಿಸ್ತು ಮತ್ತು ಪ್ರಸ್ತುತ ವಿದ್ಯಮಾನಗಳಿಗೆ ನಮ್ಮನ್ನು ನಾವು ಹೊಂದಿಸಿಕೊಳ್ಳುವ ಮನೋಭಾವ ಅಗತ್ಯ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ.ಸವಿತಾ ಹೇಳಿದರು.
ಕರ್ನಾಟಕ ಉನ್ನತ ಶಿಕ್ಷಣ ಪರಿಷತ್, ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಪ್ರಾಧ್ಯಾಪಕರಿಗೆ ಶುಕ್ರವಾರ ಆಯೋಜಿಸಿದ್ದ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. 
ಸಮಾಜ ನಿರ್ಮಾಣದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಪಾತ್ರ ಹಿರಿದು. ಸರ್ಕಾರಿ ಕಾಲೇಜುಗಳಿಗೆ ಸೇರುವುದು ಗ್ರಾಮೀಣ ಹಿನ್ನೆಲೆಯ ಮಕ್ಕಳು. ಅವರಿಗೆ ಸೂಕ್ತ ಮಾರ್ಗದರ್ಶನ, ಮೌಲ್ಯಯುತ ಶಿಕ್ಷಣ ಒದಗಿಸಬೇಕು. ಜತೆಗೆ ಉದ್ಯೋಗಾವಕಾಶ ಸೃಷ್ಟಿಸಬೇಕಿದೆ. ಪ್ರಾಧ್ಯಾಪಕರಲ್ಲಿ ಶಿಸ್ತು ಮತ್ತು ಬದ್ಧತೆ ಅತ್ಯಗತ್ಯ ಎಂದರು.
ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಡಿ.ಎಸ್.ಪ್ರತಿಮಾ ಮಾತನಾಡಿ, ಸಮಾಜದಲ್ಲಿ ಸರ್ಕಾರಿ ಕಾಲೇಜುಗಳ ಕುರಿತು ಮೂಡಿರುವ ಋಣಾತ್ಮಕ ಭಾವನೆ ಬದಲಾಯಿಸುವ ಜವಾಬ್ದಾರಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮೆಲ್ಲರ ಮೇಲಿದೆ. ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಪರಿಪೂರ್ಣ ವಿದ್ಯಾರ್ಥಿಗಳು ಸೃಷ್ಟಿಯಾಗಬೇಕು ಎಂದು ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಬಿಐಎಂಎಸ್‌ನ ಹಿರಿಯ ಪ್ರಾಧ್ಯಾಪಕ ಪ್ರೊ.ಡಿ.ಆನಂದ್, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಆರ್.ಎಚ್.ಪವಿತ್ರಾ, ಪ್ರಾಂಶುಪಾಲ ಡಾ.ಸಿ.ನಟರಾಜ್, ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ಎ.ಬಿ.ನಾಗೇಂದ್ರಪ್ರಸಾದ್, ಕಾಲೇಜಿನ ಪಾತ್ರಾಂಕಿತ ವ್ಯವಸ್ಥಾಪಕಿ ಲಲಿತಾಕುಮಾರಿ, ತರಬೇತಿ ಸಂಯೋಜಕ ಡಾ.ಮುತ್ತುರಾಜ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net