ಮಲೇರಿಯಾ ತಡೆಗೆ ಸಾರ್ವಜನಿಕರು ಸಹಕರಿಸಿ

ಬೆಟ್ಟದತುಂಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವತಿಯಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ನಡೆಯಿತು. ರವಿ, ಸಿಂಗ್ರಿ, ಜಲೇಂದ್ರ, ಸತೀಶ್ ಇದ್ದರು.
ಬೆಟ್ಟದತುಂಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವತಿಯಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ನಡೆಯಿತು. ರವಿ, ಸಿಂಗ್ರಿ, ಜಲೇಂದ್ರ, ಸತೀಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್. ರವಿ ಅಭಿಮತ
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದತುಂಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವತಿಯಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್. ರವಿ ಮಾತನಾಡಿ, ಮಲೇರಿಯಾ ಸೊಳ್ಳೆಯಿಂದ ಹರಡುವ ಅಪಾಯಕಾರಿ ಕಾಯಿಲೆಯಾಗಿದೆ. ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಳೆಗಾಲದ ಸಂದರ್ಭದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆ ಪರದೆ ಬಳಕೆ ಮಾಡುವುದು ಹಾಗೂ ಜ್ವರ ಕಾಣಿಸಿಕೊಂಡ ತಕ್ಷಣ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ. ಮಲೇರಿಯಾ ನಿರ್ಮೂಲನೆಗೆ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು. ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಿದರೆ ಮಾತ್ರ ಕಾಯಿಲೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕ ವೈ.ಕೆ ಸಿಂಗ್ರಿ, ಶಿಕ್ಷಕರಾದ ಟಿ.ಎಸ್.ಜಲೇಂದ್ರ , ಎನ್.ಎಸ್ ಸತೀಶ್, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net