ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ನಂಜನಗೂಡು ನಗರದ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂಜನಗೂಡು ನಗರದ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Published on
ನಂಜನಗೂಡು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ ಚಾಲನೆ ನೀಡಿದರು.
ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯಾದ್ಯಂತ ಇಂದು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ, ಪೋಲಿಯೋಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಿ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜ್, ತಾಲೂಕು ವೈದ್ಯಾಧಿಕಾರಿ ಡಾ.ಈಶ್ವರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಪ್ರಸಾದ್, ಶ್ರೀಧರ್, ದೇಬೂರು ಅಶೋಕ್, ಚಂದನ್, ವಿಜಯ್ ಕುಮಾರ್ ಸೇರಿದಂತೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net