ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

ಕೆ.ಆರ್.ನಗರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಜಾಥಾಕ್ಕೆ ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ ಚಾಲನೆ  ನೀಡಿದರು. ಸಿ.ನಟರಾಜ್, ಆರ್.ಕೃಷ್ಣಪ್ಪ, ರಮೇಶ್, ಸಿ.ಎಂ.ರೇಖಾ, ಸುದಾಲತಾ ಇದ್ದರು.
ಕೆ.ಆರ್.ನಗರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಜಾಥಾಕ್ಕೆ ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ ಚಾಲನೆ ನೀಡಿದರು. ಸಿ.ನಟರಾಜ್, ಆರ್.ಕೃಷ್ಣಪ್ಪ, ರಮೇಶ್, ಸಿ.ಎಂ.ರೇಖಾ, ಸುದಾಲತಾ ಇದ್ದರು.
Published on
ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕಿನಲ್ಲಿ ಡಿ.21ರಿಂದ 24ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಎರಡು ಹನಿ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕು ಎಂದು ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ ಮನವಿ ಮಾಡಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಡಿ.21ರಿಂದ 3 ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಿ ಸಹಕಾರ ನೀಡಬೇಕು. ಈ ಹಿಂದೆ ಎಷ್ಟೇ ಬಾರಿ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿದ್ದರೂ ತಪ್ಪದೇ ಲಸಿಕೆ ಹಾಕಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ ಮಾತನಾಡಿ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕಿನಲ್ಲಿ 5 ವರ್ಷದೊಳಗಿನ ಮಕ್ಕಳು 15238 ಇದ್ದಾರೆ. 179 ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಲಿವೆ, 716 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ವೈದ್ಯರ ಜತೆ 45 ಮೇಲ್ವಿಚಾರಣೆ ಸಿಬ್ಬಂದಿ ಉಸ್ತುವಾರಿ ವಹಿಸಿ ಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಡಿ.21ರಂದು ಪಲ್ಸ್ ಪೋಲಿಯೋ ಲಸಿಕೆಯ ಹನಿ ಹಾಕಲಾಗುತ್ತದೆ. ಡಿ.22 ಮತ್ತು 23 ರಂದು ಪ್ರತಿ ಮನೆಮನೆಗೂ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳದೆ ಇರುವ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಲಾಗುವುದು, ಡಿ.24 ರಂದು ಕೆ.ಆರ್.ನಗರ ಪಟ್ಟಣದಲ್ಲಿ ಒಂದು ದಿನಪೂರ್ತಿ ಲಸಿಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.
ಟಾಸ್ಕ್‌ಫೋರ್ಸ್ ಸಮಿತಿ ರಚಿಸಲಾಗಿದ್ದು, ಇದರಲ್ಲಿ ಪಂಚಾಯತ್‌ರಾಜ್, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ, ತಾಪಂ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಸಿ.ನಟರಾಜ್, ಬಿಇಒ ಆರ್.ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ರಮೇಶ್, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಅಕ್ಕಮಹಾದೇವಿ, ಟೌನ್ ಸಿ.ಆರ್.ಪಿ.ಹರಿಪ್ರಸಾದ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಜೆ.ಮಹೇಶ್, ಆರೋಗ್ಯ ಸುರಕ್ಷಣಾಧಿಕಾರಿಗಳಾದ ಪಾರ್ವತಿ, ಸುಮಲತಾ, ಹೇಮೇಶ್, ಭರತ್, ಅಂಬರೀಶ್, ಮಹೇಶ್, ಶಾಲಾ ಮುಖ್ಯ ಶಿಕ್ಷಕಿ ಸುದಾಲತಾ, ಹಿರಿಯ ಶಿಕ್ಷಕ ಒಂಟಿಮನೆ ನಾಗರಾಜ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net