ತಾಲೂಕಿನ ಬಿ.ಮಟಕೆರೆ ಎಸ್ಸಿ ಕಾಲೋನಿ ಗ್ರಾಮದ ಜಮೀನಿನಲ್ಲಿ ಬುಧವಾರ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡ ಪರಿಣಾಮ ರೈತರು ಕೆಲಕಾಲ ಆತಂಕಕ್ಕೊಳಗಾದರು.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಹೆಬ್ಬಾವು ಕಾಣಿಸಿಕೊಂಡಿದ್ದು, ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆಯ ಸಿಬ್ಬಂದಿ ಯಾವುದೇ ತೊಂದರೆಯಾಗದಂತೆ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು,ಕಾಡಿಗೆ ಬಿಡಲಾಯಿತು.