ಕೀಟನಾಶಕಗಳ ಬಳಕೆ ತಗ್ಗಿಸಲು ಅರಿವು ಮೂಡಿಸಿ

11ನೇ ಕೃಷಿ ಗಣತಿಯ ಮೂರನೇ ಹಂತದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
11ನೇ ಕೃಷಿ ಗಣತಿಯ ಮೂರನೇ ಹಂತದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
Published on

ಪ್ರಮುಖ ಮುಖ್ಯಾಂಶಗಳು

  • 11ನೇ ಕೃಷಿ ಗಣತಿಯ ಮೂರನೇ ಹಂತದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಮೈಸೂರು: ರೈತರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಅಧಿಕ ಇಳುವರಿ ಪಡೆದುಕೊಳ್ಳಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 11ನೇ ಕೃಷಿ ಗಣತಿಯ ಮೂರನೇ ಹಂತದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. 
 ಜಿಲ್ಲೆಯಲ್ಲಿ ಹಿಡುವಳಿದಾರರ ಸಂಖ್ಯೆ ಹೆಚ್ಚಳವಾಗಬೇಕು. ನಿಯಮಿತವಾಗಿ ಮಣ್ಣು ಪರೀಕ್ಷೆ ಮಾಡುವ ಮೂಲಕ ಯಾವ ಮಣ್ಣಿಗೆ ಯಾವ ಬೆಳೆಯನ್ನು ಬೆಳೆಯುವ ಮೂಲಕ ಹೆಚ್ಚು ಇಳುವರಿ ಪಡೆಯಬಹುದು ಎಂಬುದರ ಬಗ್ಗೆ ಅರಿವು ಮೂಡಿಸಬೇಕು. ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆಯಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲ ಬೆಳೆಗಳ ವಿಸ್ತೀರ್ಣ ಹೆಚ್ಚಳವಾಗಿದೆ. ಜಿಲ್ಲೆಯ ಹಿಡುವಳಿದಾರರ ನೀರಾವರಿ ವಿಸ್ತೀರ್ಣ ಶೇ.3.55ರಷ್ಟು ಹೆಚ್ಚಳವಾಗಿದೆ. ನೀರಾವರಿ ಅಲ್ಲದ ವಿಸ್ತೀರ್ಣ ಶೇ.5.72ರಷ್ಟು ಕಡಿಮೆಯಾಗಿದೆ. ಹಸಿರು ಗೊಬ್ಬರದ ಸಂಸ್ಕರಿಸಿದ ಎಲ್ಲ ಬೆಳೆಗಳ ಒಟ್ಟು ವಿಸ್ತೀರ್ಣ ಹೆಚ್ಚಳವಾಗಿದೆ ಎಂದು ತಿಳಿಸಿದರು.
ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆ ಜಿಲ್ಲೆಯಲ್ಲಿ ಹೆಚ್ಚಳವಾಗಿದೆ. ಇದು ಕಡಿಮೆ ಆಗುವಂತೆ ರೈತರಿಗೆ ಅರಿವು ಮೂಡಿಸಬೇಕು. ಹೆಚ್ಚಿನ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕ ಬಳಕೆ ಆಗಬಾರದು. ಹೆಚ್ಚಿನ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಆರ್.ಚಿತ್ರಾ, ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಎನ್.ವಿ.ಸತೀಶ್, ಜಿಲ್ಲಾ ಮಕ್ಕಳ ಮಕ್ಕಳ ಸಂತಾನೋತ್ಪತ್ತಿ ಅಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮದ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಸುರೇಶ್ ಅಂಗಡಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ತಹಸೀಲ್ದಾರ್ ರಾಮ್ ಪ್ರಸಾದ್, ಸಹಾಯಕ ನಿರ್ದೇಶಕ ಎಂ.ವಿ.ಹೊನ್ನೇಗೌಡ , ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಗಣೇಶ, ಎಸ್.ಸಂಧ್ಯಾ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net