ರಂಜಿತಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ

 ಹುಣಸೂರು ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂದೆ ದಲಿತ ಮುಂಖಡರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಕಚೇರಿಯ ತಹಸೀಲ್ದಾರ್ ಯದುಗಿರೀಶ್‌ಗೆ ಮನವಿ ಸಲ್ಲಿಸಿದರು. ನಿಂಗರಾಜ ಮಲ್ಲಾಡಿ, ಬಲ್ಲೇನಹಳ್ಳಿ ಕೆಂಪರಾಜು, ಪಾರ್ವತಮ್ಮ, ಗೋವಿಂದ ಇತರರಿದ್ದರು.
ಹುಣಸೂರು ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂದೆ ದಲಿತ ಮುಂಖಡರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಕಚೇರಿಯ ತಹಸೀಲ್ದಾರ್ ಯದುಗಿರೀಶ್‌ಗೆ ಮನವಿ ಸಲ್ಲಿಸಿದರು. ನಿಂಗರಾಜ ಮಲ್ಲಾಡಿ, ಬಲ್ಲೇನಹಳ್ಳಿ ಕೆಂಪರಾಜು, ಪಾರ್ವತಮ್ಮ, ಗೋವಿಂದ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ದಲಿತ ಸಂಘರ್ಷ ಸಮಿತಿ ಆಗ್ರಹ
  • ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಹುಣಸೂರು: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಪತ್ರಿಕೋದ್ಯಮ ವಿದ್ಯಾರ್ಥಿನಿ ರಂಜಿತಾ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದಲಿತ ಸಂಘರ್ಷ ಸಮಿತಿ ಸದಸ್ಯರು ಬುಧವಾರ ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ನಿಂಗರಾಜ್ ಮಲ್ಲಾಡಿ ಮಾತನಾಡಿ, ಕೊಡಗು ಜಿಲ್ಲೆಯ ಆದಿವಾಸಿಗಳು ಸ್ವಂತ ಮನೆ, ನಿವೇಶನ ಇಲ್ಲದೆ ಜೀವನ ಪರ್ಯಂತ ಎಸ್ಟೇಟ್ ಮಾಲೀಕರ ಲೈನ್‌ಮನೆಗಳಲ್ಲಿ ಜೀತದಾಳುಗಳಂತೆ ಶೋಷಣೆಗೆ ಒಳಗಾಗಿದ್ದಾರೆ. ಆದಿವಾಸಿಗಳ ಪರವಾಗಿ ದನಿಯೆತ್ತಿ ಹೋರಾಟ ನಡೆಸಿದ್ದ ವಿದ್ಯಾರ್ಥಿನಿ ರಂಜಿತಾಳನ್ನು ಮಾರ್ಚ್‌ನಲ್ಲಿ ಟಿ.ಶೆಟ್ಟಿಗೇರಿ ಗ್ರಾಮದ ಅಯ್ಯಪ್ಪ ಎಂಬಾತ ಬೆಂಗಳೂರಿನಲ್ಲಿ ಅತ್ಯಾಚಾರ ಮಾಡಿ ಕುತ್ತಿಗೆಗೆ ವೈರ್ ಬಿಗಿದು ಕೊಲೆ ಮಾಡಿದ್ದಾನೆ. ರಂಜಿತಾಳ ಕೊಲೆಯು ವ್ಯವಸ್ಥಿತ ಪಿತೂರಿಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪಿತೂರಿ ಮಾಡಿರುವ ಭೂ ಮಾಲೀಕರ ವಿರುದ್ಧವು ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ಬಳಿಕ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಕಚೇರಿಯ ತಹಸೀಲ್ದಾರ್ ಯದುಗಿರೀಶ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಲ್ಲೇನಹಳ್ಳಿ ಕೆಂಪರಾಜು, ಕಿರಿಜಾಜಿ ಗಜೇಂದ್ರ, ಮಾಲಿಕ್ ಪಾಷ, ಪಾರ್ವತಮ್ಮ, ಗೋವಿಂದ ಮುಂತಾದವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net