ಸರ್ಕಾರದ ಯೋಜನೆಗಳು ಸದುಪಯೋಗವಾಗಲಿ

ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮಗಳ ವಾರ್ಡ್ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ವಾಸು, ನೋಡಲ್ ಕೃಷಿ ಅಧಿಕಾರಿ ಚಂದ್ರೇಗೌಡ, ಅಭಿವೃದ್ಧಿ ಅಧಿಕಾರಿ ಅಭಿ, ಸದಸ್ಯರಾದ ಆರ್.ಎಸ್ ವಿಜಯಕುಮಾರ್, ಭಾರತಿ ಇದ್ದರು.

Published on
ರಾವಂದೂರು : ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಆರ್ಥಿಕ ಪ್ರಗತಿ ಹೊಂದಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಭಿ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮಗಳ ವಾರ್ಡ್ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಭೆಯಲ್ಲಿ ಗ್ರಾಮದ ಜನರ ಸಮ್ಮುಖ ತಿಳಿಸಿದಾಗ ಅದನ್ನು ಗ್ರಾಮ ಪಂಚಾಯತಿ ಮಟ್ಟದ ಸಭೆಯಲ್ಲಿ ಚರ್ಚಿಸಿ, ಕ್ರಿಯಾ ಯೋಜನೆ ರೂಪಿಸಬಹುದು. ಆ ನಂತರವೇ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ, ಕಾಮಗಾರಿಗಳನ್ನು ಮಾಡಲು ನೆರವಾಗುತ್ತದೆ. ಸರ್ಕಾರದಿಂದ ಬರುವ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಗ್ರಾ ಪಂ ಸದಸ್ಯರು ಮತ್ತು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಲು ಅನುವಾಗುತ್ತದೆ. ಜನರಿಗೆ ತಲುಪಬೇಕಾದ ಸರ್ಕಾರಿ ಸೌಲಭ್ಯಗಳನ್ನು ನಿಗದಿತ ಸಮಯಕ್ಕೆ ತಲುಪಿಸಲು
ಸಹಕಾರಿಯಾಗುತ್ತದೆ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ವಾಸು, ನೋಡಲ್ ಕೃಷಿ ಅಧಿಕಾರಿ ಚಂದ್ರೇಗೌಡ. ಸದಸ್ಯರಾದ ಆರ್.ಎಸ್ ವಿಜಯಕುಮಾರ್, ಭಾರತಿ, ಮಲ್ಲೇಶ್ ಕಾರ್ಯದರ್ಶಿ ಮಹದೇವ್ ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net