ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ:ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ನಗರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಕುಮಾರ ಸ್ವಾಮೀಜಿ, ಪಿ.ಸುಜ್ಞಾನ ಮೂರ್ತಿ, ಭವ್ಯಾ, ಎನ್.ನಂದಕುಮಾರ್ ಇದ್ದರು.
ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ನಗರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಕುಮಾರ ಸ್ವಾಮೀಜಿ, ಪಿ.ಸುಜ್ಞಾನ ಮೂರ್ತಿ, ಭವ್ಯಾ, ಎನ್.ನಂದಕುಮಾರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮಾಜದ ಮುಂದೆ ಗುರುತಿಸಿ ಗೌರವಿಸುವುದರಿಂದ ಮತ್ತಷ್ಟು ಯುವಜನರು ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ದೊರೆಯುತ್ತದೆ
  • ವಿಶ್ವಕರ್ಮ ಸಮುದಾಯದ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ನೀಡುತ್ತವೆ.

ಮೈಸೂರು:

ವಿದ್ಯಾರ್ಥಿಗಳ ಪ್ರತಿಭೆ, ಸಾಧನೆ ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವಿಶ್ವಕರ್ಮ ಜಾಗೃತಿ ವೇದಿಕೆಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸಮಾಜದ ಮುಂದೆ ಗುರುತಿಸಿ ಗೌರವಿಸುವುದರಿಂದ ಮತ್ತಷ್ಟು ಯುವಜನರು ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ದೊರೆಯುತ್ತದೆ ಎಂದರು.
ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ವಿಶ್ವಕರ್ಮ ಸಮುದಾಯದ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ನೀಡುತ್ತವೆ. ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯ ಎಂದರು.
ಶ್ರೀಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಡಾ.ಕುಮಾರ ಸ್ವಾಮೀಜಿ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ಸುಜ್ಞಾನಮೂರ್ತಿ, ನಟಿ ಭವ್ಯಾ, ಮುಖಂಡ ಎನ್.ನಂದಕುಮಾರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net