ಹುಬ್ಬಳ್ಳಿ-ಅರಸೀಕೆರೆ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16214) ಏ.17 ರಿಂದ 20ರವರೆಗೆ ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಬೀರೂರಿನಲ್ಲೇ ಸಂಚಾರ ಮುಕ್ತಾಯಗೊಳಿಸಲಿದೆ. ಅದೇ ರೀತಿ, ಅರಸೀಕೆರೆ-ಹುಬ್ಬಳ್ಳಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16213) ಏ.18 ರಿಂದ 21ರವರೆಗೆ ಅರಸೀಕೆರೆ ಮತ್ತು ಬೀರೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆ ಬದಲಿಗೆ ಬೀರೂರು ನಿಲ್ದಾಣದಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.