ರಾಜ್ಯದಲ್ಲಿ ಒಳಮೀಸಲಾತಿ ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹಿ

ಮಾ.25ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರೆತಿಭಟನೆಯಲ್ಲಿ ತಾಲೂಕಿನ ಬಲಗೈ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿ.ದೇವರಾಜ ಅರಸು ಅಭಿಮಾನಿಗಳ ಬಳಗದ ಅಧ್ಯಕ್ಷ ಬಿಳಿಕೆರೆ ರಾಜು ಮನವಿ ಮಾಡಿದರು.
ಮಾ.25ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರೆತಿಭಟನೆಯಲ್ಲಿ ತಾಲೂಕಿನ ಬಲಗೈ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿ.ದೇವರಾಜ ಅರಸು ಅಭಿಮಾನಿಗಳ ಬಳಗದ ಅಧ್ಯಕ್ಷ ಬಿಳಿಕೆರೆ ರಾಜು ಮನವಿ ಮಾಡಿದರು.
Published on
ಹುಣಸೂರು : ರಾಜ್ಯದಲ್ಲಿ ಒಳಮೀಸಲಾತಿ ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹಿಸಿ ಬಲಗೈ ಸಮಾಜ ಮಾ.25ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರೆತಿಭಟನೆಯಲ್ಲಿ ತಾಲೂಕಿನ ಬಲಗೈ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿ.ದೇವರಾಜ ಅರಸು ಅಭಿಮಾನಿಗಳ ಬಳಗದ ಅಧ್ಯಕ್ಷ ಬಿಳಿಕೆರೆ ರಾಜು ಮನವಿ ಮಾಡಿದರು.
ರಾಜ್ಯ ಸರ್ಕಾರ ಒಳಮೀಸಲಾತಿ ನೀತಿ ಜಾರಿಯಲ್ಲಿ ತಪ್ಪು ಹಜ್ಜೆಗಳನ್ನು ಇಡುವ ಮೂಲಕ ಸಮುದಾಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ಆಗಿರುವ ಪರಿಶಿಷ್ಟ ಜಾತಿ ಸಮುದಾಯಗಳನ್ನು ಒಡೆದಲ್ಲಿ ಮುಂದಿನ ದಿನಗಳಲ್ಲಿ ಅಧಿಕಾರ ಸಿಗುವುದು ಕಷ್ಟಸಾಧ್ಯವಾಗಲಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಳಮೀಸಲಾತಿ ಕುರಿತು ನೀಡಿರುವ ವರದಿ ಸಾಮಾಜಿಕ ನ್ಯಾಯವನ್ನು ನೀಡುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಸಮಾಜ ಬೀದಿಗಿಳಿದು ಉಗ್ರ ಹೋರಾಟ ನಡೆಸಲಿದೆ ಎಂದು ಬುಧವಾರ ಸುದ್ದಿಗೋಷ್ಟಿಯಲ್ಲಿ ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ದಲಿತ ಮುಖಂಡರಾದ ಕೊಳಗಟ್ಟ ಕೃಷ್ಣ, ಶಿವರಾಜು, ಸೋಮಶೇಖರ್, ಅಶೋಕ, ಲೋಕೇಶ್, ದೇವರಾಜ್, ಮಲ್ಲೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net