ಮೈಸೂರಿನಲ್ಲಿ ರಾಸಾಯನಿಕ ವಸ್ತು ಬಳಕೆಗೆ ಕಡಿವಾಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ

 ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿಚಾರಿಸಿದರು. ಜಿ.ಲಕ್ಷ್ಮೀಕಾಂತ ರೆಡ್ಡಿ,  ಡಾ.ದಾಕ್ಷಾಯಿಣಿ, ಡಾ.ಶೋಭಾ, ಎಂ.ಲಕ್ಷ್ಮಣ್ ಇನ್ನಿತರರಿದ್ದರು.
ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿಚಾರಿಸಿದರು. ಜಿ.ಲಕ್ಷ್ಮೀಕಾಂತ ರೆಡ್ಡಿ, ಡಾ.ದಾಕ್ಷಾಯಿಣಿ, ಡಾ.ಶೋಭಾ, ಎಂ.ಲಕ್ಷ್ಮಣ್ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ
  • ಇದು ಆಕಸ್ಮಿಕ ಘಟನೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.
  • ಸ್ಫೋಟ ಪ್ರಕರಣ ಅನಿರೀಕ್ಷಿತ ಮತ್ತು ಆತಂಕಕಾರಿ
ಮೈಸೂರು: ಸ್ಫೋಟ ಪ್ರಕರಣ ಅನಿರೀಕ್ಷಿತ ಮತ್ತು ಆತಂಕಕಾರಿ. ಇನ್ಮುಂದೆ ಪ್ರವಾಸಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ರಾಸಾಯನಿಕ ವಸ್ತು ಬಳಕೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಸ್ಫೋಟದಿಂದ ಗಾಯಗೊಂಡು ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಆಕಸ್ಮಿಕ ಘಟನೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.
ಮೃತ ಸಲೀಂ ಸೀಜನ್ ವ್ಯಾಪಾರಿ. ಮೊದಲು ಐಸ್‌ಕ್ಯಾಂಡಿ ಮಾರಾಟ ಮಾಡುತ್ತಿದ್ದ. ಈಗ ಹೀಲಿಯಂ ಸಿಲಿಂಡರ್ ಬಳಸಿ ಬಲೂನ್ ಮಾರಾಟ ಮಾಡುತ್ತಿದ್ದ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಆರ್.ಎನ್.ಬಿಂದುಮಣಿ, ಸುಂದರ್‌ರಾಜ್, ಮೈಸೂರು ವೈದ್ಯಕೀಯ ಕಾಲೇಜಿನ ಡೀನ್ ಡಾ.ದಾಕ್ಷಾಯಿಣಿ, ಕೆ.ಆರ್.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಶೋಭಾ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net