ಮೈಸೂರು: ನಗರದ ಕುಕ್ಕರಹಳ್ಳಿ ಬಳಿಯ ರೈಲ್ವೆ ಗೇಟ್ ಬಳಿ ರೈಲಿಗೆ ತಲೆಕೊಟ್ಟು ನಿವೃತ್ತ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೋಗಾದಿಯ ನಿವಾಸಿ, ನಿವೃತ್ತ ಎಎಸ್‌ಐ ಲವಕುಶ(60)ಮೃತರು. ನಗರದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಮೂರು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು.
ಭಾನುವಾರ ಬೆಳಗ್ಗೆ ಮನೆಯಿಂದ ಹೊರ ಬಂದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.