ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20ರಂದು ತಾಲೂಕಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದು, ಈ ವೇಳೆ ತಾಲೂಕಿನ ಜ್ವಲಂತ ಸಮಸ್ಯೆಗಳ ಕುರಿತು ಗಮನಿಸಬೇಕಿದೆ. ನಗರದ ಬೈಪಾಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಡಿ.ದೇವರಾಜ ಅರಸು ಸಾರ್ವಜನಿಕ ಆಸ್ಪತ್ರೆಯ ಕಾಮಗಾರಿ ಕುಂಟುತ್ತಾ ಸಾಗಿದ್ದು, ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಬೇಕು. ನಗರದ ಐಕೆ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ರೇಷ್ಮೆ ಮಾರುಕಟ್ಟೆ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಈ ಹಿಂದಿನ ವೈಭವವನ್ನು ಮರಳಿ ತರಲು ರೇಷ್ಮೆ ಮಾರುಕಟ್ಟೆಯನ್ನು ಮರು ಸ್ಥಾಪಿಸಿ ರೇಷ್ಮೆ ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡಬೇಕು.