ಸಿಎಸ್‌ಐಆರ್, ಇಸ್ರೋ, ಡಿಎಸ್‌ಟಿ, ಡಿಬಿಟಿ, ಐಸಿಎಆರ್, ಐಸಿಎಂಆರ್, ಎಂಒಇಎಸ್ ಸೇರಿದಂತೆ ಪ್ರಮುಖ ಸಂಸ್ಥೆಗಳ ಸಹಕಾರ ನೀಡಲಿದ್ದು, ಅಂದಾಜು 100 ಸ್ಟಾರ್ಟ್‌ಅಪ್‌ಗಳು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್‌ಎಂಇ), ತಂತ್ರಜ್ಞಾನ ಪ್ರದರ್ಶಕರು ತಮ್ಮ ಅತ್ಯಾಧುನಿಕ ಆವಿಷ್ಕಾರಗಳು, ತಂತ್ರಜ್ಞಾನ ಪ್ರದರ್ಶಿಸಲಿದ್ದಾರೆ. ತಂತ್ರಜ್ಞಾನ ವರ್ಗಾವಣೆ, ವಾಣಿಜ್ಯೀಕರಣ, ಕೈಗಾರಿಕಾ ಸಹಭಾಗಿತ್ವ, ಹೂಡಿಕೆ ಜಾಲತಾಣ ನಿರ್ಮಾಣ, ಉದ್ಯಮಶೀಲತೆಯ ಅಭಿವೃದ್ಧಿಗೆ ಈ ಸಮಾವೇಶವು ಉತ್ತಮ ಅವಕಾಶ ಕಲ್ಪಿಸಿಕೊಡುತ್ತದೆ ಎಂದು ತಿಳಿಸಿದರು.