ಜನರಿಗೆ ಭ್ರಷ್ಟಾಚಾರಮುಕ್ತ ಆಡಳಿತದ ಭರವಸೆ ನೀಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸರ್ಕಾರ ಈಗ ಮಾಡುತ್ತಿರುವುದಾದರೂ ಏನು? ದೇವಸ್ಥಾನದಲ್ಲೂ ಲಂಚ ಪಡೆಯುತ್ತಿದೆ. ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಜಾತ್ರಾ ಮಹೋತ್ಸವದಲ್ಲಿ ಕೇವಲ ಪೇಂಟಿಂಗ್ ಕೆಲಸಕ್ಕೆ ಜಿಎಸ್‌ಟಿ ಹೊರತುಪಡಿಸಿ 5,27,639 ರೂ. ಬಿಲ್ ಮಾಡಲಾಗಿದೆ. ಈ ಹಿಂದೆ ಇದೇ ಕೆಲಸಕ್ಕೆ ಗರಿಷ್ಠ ಎಂದರೆ ಕೇವಲ 1 ಲಕ್ಷ ರೂ. ವೆಚ್ಚವಾಗುತ್ತಿತ್ತು. ಇನ್ನು ಲೈಟಿಂಗ್, ಸೌಂಡ್ ಸಿಸ್ಟಮ್ ಮತ್ತು ಬ್ಯಾರಿಕೇಡ್ ವ್ಯವಸ್ಥೆಗೆ 14,74,876 ರೂ. ಬಿಲ್ ಮಾಡಿದ್ದಾರೆ. ನಿರ್ಮಿತಿ ಕೇಂದ್ರದಿಂದ ಈ ಜಾತ್ರೆಗಾಗಿ 32 ಲಕ್ಷ ರೂ. ಡ್ರಾ ಮಾಡಲಾಗಿದೆ. ರೈತರು ಜಾನುವಾರುಗಳನ್ನು ಕಟ್ಟುತ್ತಾರೆ. ವ್ಯಾಪಾರಿಗಳು ಅಂಗಡಿಗಳನ್ನು ಹಾಕುತ್ತಾರೆ. 32 ಲಕ್ಷ ರೂ. ಖರ್ಚು ಮಾಡಿದ್ದಾದರೂ ಯಾಕೆ ಎಂದು ಪ್ರಶ್ನಿಸಿದರು.