ಹೆಣ್ಣು ಮಕ್ಕಳಿಗೆ ಶಿಕ್ಷಣದಲ್ಲಿ ಆದ್ಯತೆ ಇರಲಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರೊ.ಎಂ.ಆರ್.ಗಂಗಾಧರ್, ಪ್ರೊ.ಶರಣಪ್ಪ ವಿ. ಹಲಸೆ, ಪ್ರೊ.ಎಸ್.ಕೆ.ನವೀನ್ ಕುಮಾರ್, ಡಾ.ಸಿ.ಎಸ್.ಆನಂದಕುಮಾರ್, ಪ್ರೊ.ಎಂ.ರಾಮನಾಥಂ ನಾಯ್ಡು, ಡಾ.ಪಿ.ಮಂಜುನಾಥ್ ಇದ್ದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರೊ.ಎಂ.ಆರ್.ಗಂಗಾಧರ್, ಪ್ರೊ.ಶರಣಪ್ಪ ವಿ. ಹಲಸೆ, ಪ್ರೊ.ಎಸ್.ಕೆ.ನವೀನ್ ಕುಮಾರ್, ಡಾ.ಸಿ.ಎಸ್.ಆನಂದಕುಮಾರ್, ಪ್ರೊ.ಎಂ.ರಾಮನಾಥಂ ನಾಯ್ಡು, ಡಾ.ಪಿ.ಮಂಜುನಾಥ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರೊ.ಎಂ.ಆರ್.ಗಂಗಾಧರ್ ಅಭಿಪ್ರಾಯ
ಮೈಸೂರು: ಉಚಿತ ಶಿಕ್ಷಣ ಅವಶ್ಯಕವಾಗಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದೊರಕಬೇಕಿದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಹೆಚ್ಚು ಶಿಕ್ಷಣದಲ್ಲಿ ಆದ್ಯತೆ ದೊರೆಯಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಭಾರತದ ಮೊದಲ ಶಿಕ್ಷಕಿ ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ುಲೆ ಅವರ 195ನೇ ಜನ್ಮದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದಿಂದ ಮಹಿಳೆಯರ ಸಬಲೀಕರಣ ಸಾಧ್ಯವಿದೆ. ಹಾಗಾಗಿ ಹೆಣ್ಣು ಉನ್ನತ ಶಿಕ್ಷಣ ಪಡೆಯುವಂತಾಗಬೇಕು. ಇದರಿಂದ ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳ ವಿನಾಶವಾಗಲಿದೆ ಎಂದರು.
ಇಂದಿಗೂ ಸಹ ಬಹುತೇಕ ಕಡೆ ಬಾಲ್ಯ ವಿವಾಹ ನಡೆಯುತ್ತಿವೆ. ಇಂತಹ ಅನಿಷ್ಟಗಳನ್ನು ತೊಡೆಯಲು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡದರೆ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಶಿಕ್ಷಣ ಮತ್ತ ಆರೋಗ್ಯ ಖಾಸಗೀಕರಣವಾಗುತ್ತಿರುವುದರಿಂದ ಗುಣಮಟ್ಟದ ಶಿಕ್ಷಣ ಬಡ ಮಕ್ಕಳಿಗೆ ಸಿಗುವುದು ಕಷ್ಟವಾಗುತ್ತಿದೆ. ಸ್ವಾತಂತ್ರೃ ಬಂದು 75 ವರ್ಷಗಳಾದರೂ ಕೂಡ ನಾವು ಇನ್ನು ಅಭಿವೃದ್ಧಿಶೀಲ ರಾಷ್ಟ್ರ ಎಂದು ಗುರುತಿಸಿಕೊಳ್ಳುತ್ತಿದ್ದೇವೆ. ಮುಂದುವರಿದ ರಾಷ್ಟ್ರವಾಗಲು ಗುಣಮಟ್ಟದ ಶಿಕ್ಷಣದ ಕೊರತೆ ಕಾಡುತ್ತಿದೆ ಎಂದು ಹೇಳಿದರು.
ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ, ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಪರೀಕ್ಷಾಂಗ ಕುಲಸಚಿವ ಡಾ.ಸಿ.ಎಸ್.ಆನಂದಕುಮಾರ್, ಶೈಕ್ಷಣಿಕ ವಿಭಾಗದ ಡೀನ್ ಪ್ರೊ.ಎಂ.ರಾಮನಾಥಂ ನಾಯ್ಡು, ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಪಿ.ಮಂಜುನಾಥ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net