ಅಲ್ಪಸಂಖ್ಯಾತ ಸಮುದಾಯದಡಿ ಬರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್‌ಹಾಗೂ ಪಾರ್ಸಿ ಅವರಿಗೆ ಸರಳ ವಿವಾಹ ಯೋಜನೆಯಡಿ ಗುರಿ ನಿಗದಿ ಮಾಡಿ ಅರ್ಜಿ ಆಹ್ವಾನಿಸಿ ಹೆಚ್ಚಿನ ಪ್ರಚಾರ ನೀಡಬೇಕು. ಕೆಲವು ಸಮುದಾಯದಿಂದ ಅರ್ಜಿ ಬಾರದೆ ಇದ್ದಲ್ಲಿ ನಂತರ ಬೇರೆ ಸಮುದಾಯಕ್ಕೆ ಹೆಚ್ಚುವರಿಯಾಗಿ ನೀಡುವುದು ಉತ್ತಮ ಎಂದು ಸಲಹೆ ನೀಡಿದರು.