ಶ್ರೀ ಮಹದೇಶ್ವರಸ್ವಾಮಿಗೆ ರುದ್ರಾಭಿಷೇಕ

 ಕೆ.ಆರ್.ನಗರದ ಬಸವೇಶ್ವರ ಬಡಾವಣೆಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ನಿಜ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿಶೇಚ ಪೂಜೆ ನೆರವೇರಿತು.
ಕೆ.ಆರ್.ನಗರದ ಬಸವೇಶ್ವರ ಬಡಾವಣೆಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ನಿಜ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿಶೇಚ ಪೂಜೆ ನೆರವೇರಿತು.
Published on
ಕೆ.ಆರ್.ನಗರ: ನಿಜ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ನೂರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
ದೇವಾಲಯದಲ್ಲಿ ಇಂದು ಮುಂಜಾನೆ 5 ಗಂಟೆಗೆ ಮಹದೇಶ್ವರ ಸ್ವಾಮಿಗೆ ರುದ್ರಾಭಿಷೇಕ, ನಂತರ ಸಂಕಲ್ಪ, ಮಹಾಮಂಗಳಾರತಿ ನಡೆದವು. ನಿಜ ಮಣ್ಣೆತ್ತಿನ ಅಮಾವಾಸ್ಯೆಯ ಅಂಗವಾಗಿ ಗರ್ಭಗುಡಿಯಲ್ಲಿರುವ ಸ್ವಾಮಿ ವಿಗ್ರಹಕ್ಕೆ ಚಿನ್ನ ಲೇಪಿತವಾದ ಮುಖವಾಡ ಧರಿಸಿ ವಿಶೇಷವಾಗಿ ಅಲಂಕರಿಸಲಾಗಿತ್ತು. ದೇವಸ್ಥಾನ ಸಿಂಗಾರಗೊಳಿಸಿ ದೇವಾಲಯದ ಒಳಾಂಗಣದಲ್ಲಿ ಹೂವಿನ ಅಲಂಕಾರ ಮಾಡಲಾಗಿತ್ತು.
ಪ್ರತಿ ಸೋಮವಾರ ಮತ್ತು ಶುಕ್ರವಾರ ಹಾಗೂ ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆ, ವಿಶೇಷ ಹಬ್ಬ ಹರಿದಿನಗಳಲ್ಲಿ ನಡೆಯುವಂತೆ ವಿಶೇಷ ಪೂಜೆ ಜರುಗಿತು. ಅಲ್ಲದೆ ದೇವಸ್ಥಾನಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಭಕ್ತರು ಸರತಿ ಸಾಲಿನಲ್ಲಿ ಸಾಗಿ ಮಹದೇಶ್ವರ ಸ್ವಾಮಿ ದರ್ಶನ ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net