ಅಭಿವೃದ್ಧಿ ಮೂಲಕ ಜನರ ಋಣ ತೀರಿಸುವೆ

  ಸಾಲಿಗ್ರಾಮ ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ.ಡಿ.ರವಿಶಂಕರ್ ಭೂಮಿ ಪೂಜೆ ನೆರವೇರಿಸಿದರು. ಸಿ.ಪಿ.ರಮೇಶ್ ಕುಮಾರ್, ಹೇಮಲತಾ ನಾಗೇಶ್ ಇತರರು ಇದ್ದರು.
ಸಾಲಿಗ್ರಾಮ ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ.ಡಿ.ರವಿಶಂಕರ್ ಭೂಮಿ ಪೂಜೆ ನೆರವೇರಿಸಿದರು. ಸಿ.ಪಿ.ರಮೇಶ್ ಕುಮಾರ್, ಹೇಮಲತಾ ನಾಗೇಶ್ ಇತರರು ಇದ್ದರು.
Published on
ಸಾಲಿಗ್ರಾಮ: ಮೇಲೂರು ಗ್ರಾಪಂ ವ್ಯಾಪ್ತಿಯ ಜನರ ಋಣ ನನ್ನ ಮೇಲಿದೆ. ಅಭಿವೃದ್ಧಿಯ ಮೂಲಕ ಆ ಋಣವನ್ನು ತೀರಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಡಿ. ರವಿಶಂಕರ್ ಭರವಸೆ ನೀಡಿದರು.
ಮೇಲೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 65 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, 15 ವರ್ಷಗಳಿಂದ ಅಭಿವೃದ್ಧಿ ಕಾಣದ ಬಾಚಳ್ಳಿ ಗ್ರಾಮಕ್ಕೆ 25 ಲಕ್ಷ ರೂ. ಅನುದಾನ ನೀಡಿದ್ದೇನೆ. ಒಂದು ಕೋಟಿ ರೂ. ವೆಚ್ಚದಲ್ಲಿ ಬಾಚಳ್ಳಿ-ಸಂಕನಹಳ್ಳಿ-ಕೆಂಚನಹಳ್ಳಿ ಮಾರ್ಗದ ರಸ್ತೆ ಅಭಿವೃದ್ಧಿಯಾಗುತ್ತಿದೆ. ಗ್ರಾಮದ ಚಿಕ್ಕಮ್ಮ ದೇವಸ್ಥಾನಕ್ಕೆ 10 ಲಕ್ಷ ರೂ., ದೇವಮ್ಮ ದೇವಸ್ಥಾನಕ್ಕೆ 5 ಲಕ್ಷ ರೂ., ಚಲುವರಾಯಸ್ವಾಮಿ ದೇವಸ್ಥಾನಕ್ಕೆ 3 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಎಲೆಮುದ್ದನಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ, ಮೇಲೂರು ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಗೌರಿ ಅಮ್ಮ ದೇವಸ್ಥಾನದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಕುಡಿಯುವ ನೀರು, ಬೀದಿ ದೀಪ, ಪಂಪ್ ಸೆಟ್ ಲೈನ್ ಗಳ ಸಮಸ್ಯೆ ಹಾಗೂ ಸಮುದಾಯ ಭವನಗಳ ನಿರ್ಮಾಣ ಸಂಬಂಧ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು.
ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್ ಕುಮಾರ್, ಗ್ರಾಪಂ ಅಧ್ಯಕ್ಷೆ ಹೇಮಲತಾ ನಾಗೇಶ್, ತಾಪಂ ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್, ಎಂ.ಎಸ್.ಮಹದೇವ್, ತಾ.ಕಾಂಗ್ರೆಸ್ ವಕ್ತಾರ ಜಾಬೀರ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆಗಡ ನಟರಾಜ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ, ಭೂ ನ್ಯಾಯ ಮಂಡಳಿ ಸಮಿತಿ ಸದಸ್ಯ ಪುರಿಗೋವಿಂದರಾಜು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಚಂದ್ರಹಾಸ, ಗ್ರಾಪಂ ಸದಸ್ಯರಾದ ವೆಂಕಟೇಶ್, ಪುಟ್ಟಸ್ವಾಮಿಗೌಡ, ಭಾರತಿ ವಿಶ್ವನಾಥ್, ಗ್ರಾಪಂ ಮಾಜಿ ಅಧ್ಯಕ್ಷ ತೇಜೋಮೂರ್ತಿ, ಪಿಡಿಒ ಅನಿತಾ, ಮೇಲೂರು ಮಧು, ಪುನೀತ್, ಮುಖಂಡರಾದ ಪಟೇಲ್ ಹರೀಶ್, ಸ್ವರೂಪ, ಕೋಳಿ ಗೋವಿಂದ್, ಹೊಸೂರು ಕಾಂತ, ಧರ್ಮ, ಮುದುಗುಪ್ಪೆ ಮದೇವ್, ಮಂಜು ಹಾಗೂ ಗ್ರಾಮಸ್ಥರು ಇದ್ದರು.
---
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net