ನಗರದ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ, ಅರಮನೆಯಲ್ಲಿರುವ ಕೋಟೆ ಆಂಜನೇಯಸ್ವಾಮಿ, ನೂರೊಂದು ಗಣಪತಿ, ಯೋಗನರಸಿಂಹಸ್ವಾಮಿ ದೇವಸ್ಥಾನ, ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟೇಶ್ವರ ಸೇರಿದಂತೆ ನಗರದ ಪ್ರಮುಖ ದೇವಸ್ಥಾನಗಳಲ್ಲಿ ಹಬ್ಬದ ಪ್ರಯುಕ್ತ ಪೂಜೆ ನಡೆಯಿತು. ದೇವಸ್ಥಾನ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಂಡುಬಂದರು.