ಪ್ರೊ.ಎಸ್.ಮಲ್ಲಣ್ಣಗೆ ಸಂತ ಶಿಶುನಾಳ ಷರೀಫ ಪ್ರಶಸ್ತಿ

ಗಾಯಕ ಪ್ರೊ.ಎಸ್.ಮಲ್ಲಣ್ಣ ಅವರಿಗೆ  ಡಾ.ಎಚ್.ಸಿ. ಮಹದೇವಪ್ಪ ಅವರು ಭಾನುವಾರ ಸಂತ ಶಿಶುನಾಳ ಷರೀಫ ಪ್ರಶಸ್ತಿ ಪ್ರದಾನ ಮಾಡಿದರು. ಪ್ರೊ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ), ಬಲವಂತರಾವ್  ಪಾಟೀಲ್, ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಪ್ರೊ.ಕೆ.ಆರ್. ಪ್ರೇಮಲೀಲಾ ಇತರರು ಇದ್ದರು
ಗಾಯಕ ಪ್ರೊ.ಎಸ್.ಮಲ್ಲಣ್ಣ ಅವರಿಗೆ ಡಾ.ಎಚ್.ಸಿ. ಮಹದೇವಪ್ಪ ಅವರು ಭಾನುವಾರ ಸಂತ ಶಿಶುನಾಳ ಷರೀಫ ಪ್ರಶಸ್ತಿ ಪ್ರದಾನ ಮಾಡಿದರು. ಪ್ರೊ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ), ಬಲವಂತರಾವ್ ಪಾಟೀಲ್, ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಪ್ರೊ.ಕೆ.ಆರ್. ಪ್ರೇಮಲೀಲಾ ಇತರರು ಇದ್ದರು
Published on

ಪ್ರಮುಖ ಮುಖ್ಯಾಂಶಗಳು

  • 5 ಲಕ್ಷ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕ ಒಳಗೊಂಡ ಪ್ರಶಸ್ತಿ
  • ಕಳೆದ ಇಪ್ಪತ್ತು ವರ್ಷಗಳಿಂದ ಹಂಸಧ್ವನಿ ಟ್ರಸ್ಟ್ ಮೂಲಕ ಗಾಯನ
ಮೈಸೂರು: ಸುಗಮ ಸಂಗೀತ ಗಾಯಕ ಪ್ರೊ.ಎಸ್.ಮಲ್ಲಣ್ಣ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಸಂತ ಶಿಶುನಾಳ ಷರೀಫ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನೀಡುವ ಈ ಪ್ರಶಸ್ತಿಯು 5 ಲಕ್ಷ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಪ್ರೊ.ಎಸ್. ಮಲ್ಲಣ್ಣ ಅವರು ಅಮೆರಿಕ ಪ್ರವಾಸದಲ್ಲಿ ಇದ್ದಿದ್ದರಿಂದ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಆದಾಗ ಹಾಜರಾಗಲು ಸಾಧ್ಯವಾಗಿರಲಿಲ್ಲ. ವಿಜಯನಗರದ ಸಚಿವರ ನಿವಾಸದಲ್ಲಿ ಸರಳವಾಗಿ ಪ್ರಶಸ್ತಿ ಪ್ರದಾನ ಮಾಡಿದರು.
ಕಳೆದ ಇಪ್ಪತ್ತು ವರ್ಷಗಳಿಂದ ಹಂಸಧ್ವನಿ ಟ್ರಸ್ಟ್ ಮೂಲಕ ಪಿ. ಕಾಳಿಂಗರಾಯರ ಹಾಡುಗಳನ್ನು ಹಾಡುತ್ತಾ ಬಂದಿದ್ದೇನೆ. ಇದನ್ನು ಗುರುತಿಸಿ ಇಲಾಖೆಯು ಪ್ರತಿಷ್ಠಿತ ಪ್ರಶಸ್ತಿ ನೀಡಿದೆ. ಇದಕ್ಕಾಗಿ ರಾಜ್ಯ  ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಮಲ್ಲಣ್ಣ ಸಂತಸ ವ್ಯಕ್ತಪಡಿಸಿದರು.
ಹಿರಿಯ ಸಾಹಿತಿ ಪ್ರೊ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್, ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಮಲ್ಲಣ್ಣ ಅವರ ಪತ್ನಿ ಪ್ರೊ.ಕೆ.ಆರ್. ಪ್ರೇಮಲೀಲಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net