ಭರದಿಂದ ಸಾಗುತ್ತಿದೆ ಸಿಸಿ ರಸ್ತೆ ಕಾಮಗಾರಿ

ಸರಗೂರು ತಾಲೂಕಿನ ಶಿವಪುರ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿರುವುದು.
ಸರಗೂರು ತಾಲೂಕಿನ ಶಿವಪುರ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿರುವುದು.
Published on

ಸರಗೂರು:

ತಾಲೂಕಿನ ಕಾಡಂಚಿನ ಭಾಗದಲ್ಲಿರುವ ಶಿವಪುರ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಸಿಸಿ ರಸ್ತೆ ಕಾಮಗಾರಿ ಭರದಿಂದ ಸಾಗುತ್ತಿದೆ.

ಗ್ರಾಮದ ಹಲವು ರಸ್ತೆಗಳು ಹದಗೆಟ್ಟಿದ್ದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಶಾಸಕ ಅನಿಲ್ ಚಿಕ್ಕಮಾದು, 20 ಲಕ್ಷ ರೂ.ಅನುದಾನ ಒದಗಿಸಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರು.
ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಅಧ್ಯಕ್ಷ ಜಯಕುಮಾರ್ ಮಾತನಾಡಿ, ಹಲವು ವರ್ಷಗಳಿಂದ ರಸ್ತೆ ಸಮಸ್ಯೆಯಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದರು. ಇದೀಗ ಕಾಡಂಚಿನ ಭಾಗದ ಗ್ರಾಮಗಳಿಗೂ ಆದ್ಯತೆ ನೀಡಿ ಶಾಸಕರ ಅನುದಾನದಲ್ಲಿ ಉತ್ತಮ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಶಾಸಕ ಶಿವಪುರ ಗ್ರಾಮಕ್ಕೆ 20 ಲಕ್ಷ ರೂ.ಅನುದಾನವನ್ನು ಅನಿಲ್ ಚಿಕ್ಕಮಾದು ನೀಡಿದ್ದಾರೆ ಎಂದರು.
ಇದಲ್ಲದೆ, ಮುತ್ತಿಗೆಹುಂಡಿ ಗ್ರಾಮದಿಂದ ಚಿಕ್ಕಬರಗಿ ಗ್ರಾಮದವರೆಗೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಈ ಭಾಗದ ಗ್ರಾಮಗಳ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ. ರಸ್ತೆ ಕಾಮಗಾರಿಯನ್ನು ನಿಗದಿತ ಗುಣಮಟ್ಟದಲ್ಲಿ ಶೀಘ್ರ ಪೂರ್ಣಗೊಳಿಸಬೇಕು. ಶಿವಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಗತ್ಯ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೂ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net