ಸರಗೂರು ತಾಲೂಕಿನ ಪಟ್ಟಣದ ುಟ್‌ಪಾತ್‌ನಲ್ಲಿ ಅಳವಡಿಸಿದ ಬೋರ್ಡ್‌ಗಳನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದರು.
Published on:
Copied
Follow Us
ಸರಗೂರು:
ಪಟ್ಟಣದ ಪ್ರಮುಖ ಮುಖ್ಯರಸ್ತೆಗಳ ಬದಿಯಲ್ಲಿ ಹಾಗೂ ಕೆಇಬಿ ಕಚೇರಿಯಿಂದ ಕಬಿನಿ ಬಲದಂಡೆ ನಾಲೆವರೆಗೂ ಅಂಗಡಿಗಳು ಹಾಗೂ ಅನಧಿಕೃತ ಹಲವು ಲಕಗಳನ್ನು ಬುಧವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತೆರವುಗೊಳಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್ ಆಕ್ರಮಿಸಿಕೊಂಡು ಅಂಗಡಿಗಳನ್ನು ಹಾಕಿಕೊಂಡಿದ್ದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಅಲ್ಲದೆ, ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ಜಾಹೀರಾತು ಹಾಗೂ ಅಂಗಡಿಗಳ ಬೋರ್ಡ್‌ಗಳಿಂದ ಸಾರ್ವಜನಿಕರಿಗೆ ಅನನುಕೂಲವಾಗಿತ್ತು.
ಸಾರ್ವಜನಿಕರ ಹಿತದೃಷ್ಟಿಯಿಂದ ಕೆಇಬಿ ಕಚೇರಿಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಮುಖ್ಯ ರಸ್ತೆಗಳ ಬದಿಯಲ್ಲಿ ಅಳವಡಿಸಿದ್ದ ಬೋರ್ಡ್‌ಗಳನ್ನು ಸಿಬ್ಬಂದಿ ತೆರವುಗೊಳಿಸಿ, ರಸ್ತೆ ಬದಿಯನ್ನು ಸ್ವಚ್ಛಗೊಳಿಸಿದರು.
ಸಾರ್ವಜನಿಕರ ಮೆಚ್ಚುಗೆ: ಪಟ್ಟಣ ಪಂಚಾಯಿತಿ ಕೈಗೊಂಡಿರುವ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾರ್ಯಾಚರಣೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.
ಫುಟ್‌ಪಾತ್‌ಗಳು ಸಾರ್ವಜನಿಕರ ಸುಗಮ ಸಂಚಾರಕ್ಕೆ ಮುಕ್ತವಾಗಿರಬೇಕು ಎಂಬ ಉದ್ದೇಶದಿಂದ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಫುಟ್‌ಪಾತ್‌ಗಳನ್ನು ಮತ್ತೆ ಅತಿಕ್ರಮಿಸದಂತೆ ವ್ಯಾಪಾರಸ್ಥರಿಗೆ ಸೂಚನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಪಪಂ ಆರೋಗ್ಯ ಅಧಿಕಾರಿಗಳಾದ ಅನಿತಾಕುಮಾರಿ, ದರ್ಶನ್, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಇದ್ದರು.