ತಾಲೂಕಿನ ಗೋಹಳ್ಳಿ ನಿವಾಸಿ ಎಂ.ಎಸ್.ಪವನ್(25) ಮೃತರು. ಭಾನುವಾರ ಕೆಲಸದ ನಿಮಿತ್ತ ಮೈಸೂರಿಗೆ ಬಂದಿದ್ದ ಪವನ್ ರಾತ್ರಿ 11 ಗಂಟೆಯಲ್ಲಿ ಅವರು ಗೋಹಳ್ಳಿಗೆ ತೆರಳುವ ಸಲುವಾಗಿ ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಅವರ ವಾಹನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.