‘ಲಕ್ಷ್ಮೀ ಮತ್ತು ಶ್ರೀ ಗೌರಿ’ ಕಾರ್ಯಕ್ರಮ

ಸರಗೂರು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಂಚೀಪುರ ವಲಯದ ವತಿಯಿಂದ ಲಕ್ಷ್ಮಿ ಮತ್ತು ಗೌರಿ ಪೂಜೆ ಕಾರ್ಯಕ್ರಮವನ್ನು ವೇಣುಗೋಪಾಲ್,ಉದ್ಘಾಟಿಸಿದರು.ತಿರುಮಲ್ಲೇಶ್,ಸಲೀಮ ಇತ್ತರರು ಇದ್ದರು
ಸರಗೂರು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಂಚೀಪುರ ವಲಯದ ವತಿಯಿಂದ ಲಕ್ಷ್ಮಿ ಮತ್ತು ಗೌರಿ ಪೂಜೆ ಕಾರ್ಯಕ್ರಮವನ್ನು ವೇಣುಗೋಪಾಲ್,ಉದ್ಘಾಟಿಸಿದರು.ತಿರುಮಲ್ಲೇಶ್,ಸಲೀಮ ಇತ್ತರರು ಇದ್ದರು
Published on
ತಾಲೂಕಿನ ಹಂಚಿಪುರ ವಲಯದ ಕಂದೇಗಾಲ ಮತ್ತು ಕಾರ್ಯಕ್ಷೇತ್ರದ ಬಿದರಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನವಿಕಾಸ ಕಾರ್ಯಕ್ರಮವನ್ನು ‘ಲಕ್ಷ್ಮೀ ಮತ್ತು ಶ್ರೀ ಗೌರಿ’ ಎಂಬ ಹೆಸರಿನಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಲಕ್ಷ್ಮೀ ಹಾಗೂ ಗೌರಿ ಪೂಜೆಯ ಮಹತ್ವವನ್ನು ವಿವರಿಸಿದರು. ಪೂಜಾ ಕಾರ್ಯಕ್ರಮಗಳು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗಿರದೆ, ಸಿಬ್ಬಂದಿ ಹಾಗೂ ಸಂಘದ ಸದಸ್ಯರಲ್ಲಿ ಪರಸ್ಪರ ಸಹಕಾರ, ಒಗ್ಗಟ್ಟು ಮತ್ತು ಉತ್ತಮ ಚಿಂತನೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ದೇಶಗಳು ಹಾಗೂ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಲ್ಲಿ ಉಳಿತಾಯದ ಮನೋಭಾವ ಬೆಳೆಸುವುದು, ಸ್ವಾವಲಂಬನೆಗೆ ಉತ್ತೇಜನ ನೀಡುವುದು ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡುತ್ತಿರುವ ಬಗ್ಗೆ ವಿವರಿಸಿದರು.
ಕೃಷಿ ಅಧಿಕಾರಿ ತಿರುಮಲ್ಲೇಶ್ ಅವರು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ದೊರೆಯುವ ಮಾರ್ಗದರ್ಶನದ ಕುರಿತು ಮಾಹಿತಿ ನೀಡಿದರು.
ವಲಯ ಮೇಲ್ವಿಚಾರಕಿ ಸಲೀಮ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಂಚಿಪುರ ವಲಯದ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net