ಮೊಕದ್ದಮೆ ಹಿಂಪಡೆಯುವ ನಿರ್ಧಾರ ಖಂಡಿಸಿ ಎಸ್'ಡಿಪಿಐ ಪ್ರತಿಭಟನೆ
ದ್ವೇಷ ಭಾಷಣಕಾರರ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಮೊಕದ್ದಮೆ ಹಿಂಪಡೆಯುವ ನಿರ್ಧಾರಕ್ಕೆ ಆಕ್ರೋಶ
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ
ಮೈಸೂರು: ದ್ವೇಷ ಭಾಷಣಕಾರರ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಎಫ್ ಟಿಎಸ್ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವು ಸಂಘ ಪರಿವಾರವನ್ನು ಸವಾಧಾನಪಡಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಂಡಿದ್ದು, ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲನ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಸವಾಜದಲ್ಲಿ ಅಶಾಂತಿ ಹಾಗೂ ಗಲಭೆ ಸೃಷ್ಟಿಸಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಣಯಿಸಿದೆ. ಇದು ಜನತಂತ್ರ, ಕಾನೂನು ಸುವ್ಯವಸ್ಥೆ ಹಾಗೂ ಸಾವಾಜಿಕ ನ್ಯಾಯದ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ ಎಂದು ಕಿಡಿಕಾರಿದರು.
ಸರ್ಕಾರ ಈ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆದು, ಸವಾಜದಲ್ಲಿ ದ್ವೇಷ ಹರಡಿದ ಹಾಗೂ ಕೋಮು ಪ್ರಚೋದನೆ ಮೂಲಕ ಅಶಾಂತಿ ಸೃಷ್ಟಿಸಿದವರ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳುವುದರೊಂದಿಗೆ ಸೂಕ್ತ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ, ಮುಖಂಡರಾದ ಶಫಿಉಲ್ಲಾ, ಪರ್ದೇನ್ ಅಹಮದ್, ಫೀದೌಸ್, ಆಯೇಷಾ ಝಬಿ, ತಬ್ರೆಝ್ ಶೇಟ್, ಸುಹೇಲ್ ಆತ್ಿ, ಮನ್ಸೂರ್ ಖಾನ್ ಇತರರಿದ್ದರು.