ನಂಜನಗೂಡಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ಶಾಸಕ ದರ್ಶನ್ ಧ್ರುವನಾರಾಯಣ ವಿತರಿಸಿದರು. ಕಳಲೆ ಕೇಶವಮೂರ್ತಿ, ಗಾಯತ್ರಿ ಮೋಹನ್, ಶ್ರೀಕಂಠ ಇತರರು ಇದ್ದರು.
ನಂಜನಗೂಡು: ಮನೆಯಲ್ಲಿ ಹೊಲಿಗೆ ಯಂತ್ರ ಇದ್ದರೆ ಮಹಿಳೆಯರ ಸ್ವ ಉದ್ಯೋಗಕ್ಕೆ ಸಹಕಾರಿಯಾಗಲಿದೆ ಎಂದು ಶಾಸಕ ದರ್ಶನ್ ಧುವನಾರಾಯಣ ಹೇಳಿದರು.
ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಚೇತನ ನಂಜುಂಡಸ್ವಾಮಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದರು.
ತಾಲೂಕಿನ 17 ಮಹಿಳೆಯರಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸುಮಾರು 2,55,000 ರೂ.ವೆಚ್ಚದಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ. ಮಹಿಳೆಯರು ಮನೆಯಲ್ಲಿನ ಕೆಲಸಗಳನ್ನು ಮಾಡಿಕೊಂಡು ಬಿಡುವಿನ ಸಮಯದಲ್ಲಿ ಹೊಲಿಗೆ ಯಂತ್ರದಿಂದ ಆದಾಯ ಗಳಿಸಬಹುದಾಗಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಸಿ.ಎಂ.ಶಂಕರ್, ಶ್ರೀಧರ್, ಹುಲ್ಲಹಳ್ಳಿ ಮಾದಪ್ಪ, ಗಾಯತ್ರಿ ಮೋಹನ್, ಶ್ರೀಕಂಠ ಇತರರು ಇದ್ದರು.