ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಪೋಕ್ಸೋ ವಿಶೇಷ ನ್ಯಾಯಾಲಯ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ವಿವಾಹ ಮಾಡಿಕೊಂಡು ನಿರಂತರ ದೌರ್ಜನ್ಯ
ನಗರದ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ
ಮೈಸೂರು: ವಿವಾಹ ಮಾಡಿಕೊಂಡು ನಿರಂತರವಾಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ನಗರದ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪಿರಿಯಾಪಟ್ಟಣ ತಾಲೂಕಿನ ದಡಘಟ್ಟ ಗ್ರಾಮದ ನಿವಾಸಿ ಎಚ್.ಎಂ.ಕಿರಣ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ.
ಜಾತ್ರೆಯಲ್ಲಿ ಮಕ್ಕಳ ಆಟಿಕೆಗಳನ್ನು ಮಾರಾಟ ಮಾಡುವ ಈತ 2022ರ ಮಾರ್ಚ್ 23ರಂದು ಪಿಯುಸಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದ.
ಅಲ್ಲಿ ಮನೆಯೊಂದರಲ್ಲಿ ಇರಿಸಿ, ತಾಳಿ ಕಟ್ಟುವ ಮೂಲಕ ಬಾಲ್ಯವಿವಾಹ ಮಾಡಿಕೊಂಡು ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೊಪ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಆನಂದ್ ಪಿ.ಹೊಗಾಡೆ ಅವರು ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ ಶಿಕ್ಷೆಯೊಂದಿಗೆ 15 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರಿ ವಿಶೇಷ ಅಭಿಯೋಜಕಿ ಕೆ.ಬಿ.ಜಯಂತಿ ಸರ್ಕಾರದ ಪರ ವಾದ ಮಂಡಿಸಿದ್ದರು.